ಜಿಲ್ಲಾಡಳಿತ ಭವನದಲ್ಲಿ ಶಂಕರಾಚಾರ್ಯ ಜಯಂತಿ

shankara
Published on

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ  ದೇವನಹಳ್ಳಿ ತಾಲೂಕು ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ನ್ಯಾಯಾಲಯ ಸಭಾಂಗಣದಲ್ಲಿ ಆದಿ ಶಂಕರ ಶ್ರೀ ಶಂಕರಾಚಾರ್ಯ ಜಯಂತಿ ಆಚರಿಸಲಾಯಿತು.

ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಶ್ರೀ ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು. ಆದಿ ಶಂಕರ ಎಂದೇ ಪ್ರಸಿದ್ದಿ ಪಡೆದಿರುವ ಶಂಕರಾಚಾರ್ಯರು ಅದ್ವೈತ ವೇದಾಂತಕ್ಕೆ ಅಡಿಪಾಯ ಹಾಕಿ ಹಿಂದೂ ಧರ್ಮವನ್ನು ಪುನರುಜ್ಜೀವನಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸಿದರು. ಅಂತಿಮ ಗುರಿಯನ್ನು ತಿಳಿಸಿಕೊಡುವುದೇ ವೇದಾಂತ ಎಂದು ಶಂಕರಾಚಾರ್ಯರು ವೇದಾಂತಕ್ಕೆ ಸ್ಪಷ್ಟತೆಯನ್ನು ತಂದುಕೊಟ್ಟರು. ಸಮಾನತೆಯ ದರ್ಶನವೇ ಅದ್ವೈತ ದರ್ಶನ ಎಂಬ ಮಾತನ್ನು ಲೋಕದಲ್ಲಿ ಸ್ಥಿರಗೊಳಿಸಿದವರು ಎಂದು ಜಿಲ್ಲಾಧಿಕಾರಿ ಗುಣಗಾನ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net