

ಮೈಸೂರು: ಅದ್ವೈತ ತತ್ವವನ್ನು ಪ್ರತಿಪಾದಿಸಿದ ಆದಿ ಗುರು ಶಂಕರಾಚಾರ್ಯರ ಜಯಂತಿಯನ್ನು ಭಾನುವಾರ ನಗರದ ವಿವಿಧೆಡೆ ಆಚರಿಸಲಾಯಿತು.
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಕಲಾಮಂದಿರ ಆವರಣದ ಸುಚಿತ್ರಾ ಆರ್ಟ್ ಗ್ಯಾಲರಿಯಲ್ಲಿ ಶ್ರೀ ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಲಾಯಿತು.
ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಸುದರ್ಶನ್ ಅವರು ಪುಷ್ಪಾರ್ಚನೆ ಸಲ್ಲಿಸಿದರು. ಸಮುದಾಯದ ವಿವಿಧ ಮುಖಂಡರು, ಹಿರಿಯ ನಾಗರಿಕರು, ಸಾರ್ವಜನಿಕರು ಇದ್ದರು.