ಅಧ್ಯಕ್ಷ ಶಾಂತರಾಜು, ಉಪಾಧ್ಯಕ್ಷರಾಗಿ ಬಸವರಾಜು ಆಯ್ಕೆ

2
Published on

ಆಲೂರು: ತಾಲೂಕಿನ ಪಾಳ್ಯ ಹೋಬಳಿ ಮಡಬಲು ಗ್ರಾಮ ಪಂಚಾಯಿತಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಶಾಂತರಾಜು ಮತ್ತು ಉಪಾಧ್ಯಕ್ಷರಾಗಿ ಬಸವರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಯಶ್ವಂತ್ ಚಿಕೋಟೆ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಶಾಂತರಾಜು ಒಬ್ಬರೇ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಯಾಗಿದ್ದ ಸಕಲೇಶಪುರ ಎ.ಆರ್.ಕಚೇರಿಯ ಕುಮಾರ್ ಅವಿರೋಧ ಆಯ್ಕೆಯನ್ನು ಘೋಷಿಸಿದರು.
ನೂತನ ಅಧ್ಯಕ್ಷ ಶಾಂತರಾಜು ಮಾತನಾಡಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಭರವಸೆ ನೀಡಿದರು.


ಜಿಲ್ಲಾ ಎಚ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಕಬ್ಬಿನಹಳ್ಳಿ ಜಗದೀಶ್ ಮಾತನಾಡಿ, ಸಹಕಾರ ಸಂಘಗಳು ರೈತರಿಗೆ, ಉದ್ಯೋಗಿಗಳಿಗೆ, ಕಾರ್ಮಿಕರಿಗೆ ಹಾಗೂ ಸಣ್ಣ ವ್ಯಾಪಾರಿಗಳಿಗೂ ಅನುಕೂಲ ಕಲ್ಪಿಸುತ್ತಿವೆ. ಸಹಕಾರ ಸಂಘಗಳ ಯೋಜನೆಗಳು ಕರ್ನಾಟಕದಲ್ಲಿ ಸಾಕಷ್ಟು ಅಭಿವೃದ್ಧಿ ಕಾಣುತ್ತಿದ್ದು, ಸಾರ್ವಜನಿಕರ ಸೇವೆಯಲ್ಲಿ ಹೆಚ್ಚು ಅನುಕೂಲಕರವಾಗಿದೆ. ರೈತರು ಆರ್ಥಿಕವಾಗಿ ಸಬಲರಾಗಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಶೂನ್ಯ ಬಡ್ಡಿ ದರದಲ್ಲಿ ಸಾಲ ವಿತರಿಸುತ್ತಿದ್ದು, ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.


ಡಿಸಿಸಿ ಬ್ಯಾಂಕಿನ ವಿಸ್ತರಣಾಧಿಕಾರಿ ರಾಘವೇಂದ್ರ, ಬೆಳಮೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಪ್ರೇಮಮ್ಮ, ಸರೋಜಮ್ಮ, ದೇವೇಗೌಡ, ಜಯಣ್ಣ, ಪಾಲಾಕ್ಷ, ಆನಂದ, ಕರವೇ ತಾಲೂಕು ಅಧ್ಯಕ್ಷ ನಟರಾಜ್, ಕಾರ್ಯದರ್ಶಿ ಶಶಿಕಲಾ, ಸಿಬ್ಬಂದಿ ಕುಮಾರ್, ಜಾಹ್ನವಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net