ಸ್ವಾಸ್ಥ್ಯ ಕದಡುವವರ ಮೇಲೆ ಶಿಸ್ತು ಕ್ರಮ - ವಿಟ್ಲ ಪೊಲೀಸ್ ಠಾಣೆ ತನಿಖಾ ವಿಭಾಗ ಉಪನಿರೀಕ್ಷಕ ರತನ್ ಎಚ್ಚರಿಕೆ

PTR_5 JUN_1
Published on

ವಿಟ್ಲ: ಸಾಮಾಜಿಕ ಜಾಲತಾಣದಲ್ಲಿ ಸಮಾಜದ ಸ್ವಾಸ್ಥ್ಯ ಕದಡುವ ಸುದ್ದಿಗಳನ್ನು ಹಾಕಿದರೆ ಅವರ ಮೇಲೆ ಶಿಸ್ತು ಕ್ರಮಕೈಗೊಳ್ಳಲಾಗುವುದು. ಅಕ್ರಮ ಚಟುವಟಿಕೆಗಳಿಗೆ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ ವಿಟ್ಲ ಪೊಲೀಸ್ ಠಾಣೆಯ ತನಿಖಾ ವಿಭಾಗ ಉಪನಿರೀಕ್ಷಕ ರತನ್ ಹೇಳಿದರು.

ವಿಟ್ಲ ಪೊಲೀಸ್ ಠಾಣೆಯಲ್ಲಿ ಬುಧವಾರ ಬಕ್ರಿದ್ ಹಿನ್ನೆಲೆಯಲ್ಲಿ ಶಾಂತಿ ಸಭೆಯಲ್ಲಿ ಮಾತನಾಡಿದರು.

ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಲಾಖೆ ಜತೆಗೆ ಎಲ್ಲರೂ ಸಹಕರಿಸಬೇಕು. ಸಮಾಜದಲ್ಲಿ ಸೌಹಾರ್ದದಿಂದ ಇರುವ ಕಾರ್ಯವಾಗಬೇಕು. ಹಿರಿಯ ಅಧಿಕಾರಿಗಳ ಸೂಚನೆ ಪ್ರಕಾರ ತಡರಾತ್ರಿ ಮನೆಗಳಿಗೆ ಭೇಟಿ ನೀಡಲಾಗುತ್ತಿದೆ ಎಂದು ತಿಳಿಸಿದರು.

ಅರುಣ್ ವಿಟ್ಲ, ಅಶೋಕ್ ಶೆಟ್ಟಿ, ಮಹಮ್ಮದ್ ಇಕ್ಬಾಲ್, ವಿ.ಕೆ.ಎಂ.ಅಶ್ರಫ್, ಸೇಸಪ್ಪ ಬೆದ್ರಕಾಡು, ರಹೀಂ ಕುಂಡಡ್ಕ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net