

ಕಾರ್ಕಳ: ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜು ಕೋಟೇಶ್ವರ ಆಶ್ರಯದಲ್ಲಿ ಪದವಿ ಪೂರ್ವ ವಿಭಾಗದ ಉಡುಪಿ ಜಿಲ್ಲಾಮಟ್ಟದ ಚೆಸ್ ಸ್ಪರ್ಧೆಯಲ್ಲಿ ಕಾರ್ಕಳ ಕ್ರೈಸ್ಟ್‌ಕಿಂಗ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಶಾನ್ವಿ ಬಲ್ಲಾಳ್ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಈ ಮೂಲಕ ಶಿಕ್ಷಣ ಇಲಾಖೆ ಪಂದ್ಯಾಟದಲ್ಲಿ ನಿರಂತರವಾಗಿ 6ನೇ ಬಾರಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.