ಶಾಲೆ ಬೆಳವಣಿಗೆಯಲ್ಲಿ ಅಡುಗೆ ಸಿಬ್ಬಂದಿ ಪಾತ್ರ ಅಪಾರ

20ark3
Published on

ಅರಕಲಗೂಡು: ಶಾಲೆಯ ಬೆಳವಣಿಗೆಯಲ್ಲಿ ಶಿಕ್ಷಕರಷ್ಟೇ ಅಡುಗೆ ನೌಕರರ ಕಾರ್ಯವೂ ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಾಲೂಕಿನ ಶಣವಿನಕುಪ್ಪೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳು ಅಭಿಪ್ರಾಯಪಟ್ಟರು.

ಶಾಲೆಯಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಶಾರದಾ ಪೂಜೆ ಕಾರ್ಯಕ್ರಮದಲ್ಲಿ ಅಡುಗೆ ಸಿಬ್ಬಂದಿ ಪಾರ್ವತಿ ಹಾಗೂ ಜಯಮ್ಮ ಅವರನ್ನು ಗೌರವಿಸಿದ 7ನೇ ತರಗತಿ ವಿದ್ಯಾರ್ಥಿಗಳು, ಗುಣಮಟ್ಟದ ಶಿಕ್ಷಣ ನೀಡಲು ಶಿಕ್ಷಕರು ಶ್ರಮಿಸಿದರೆ, ಶುಚಿ, ರುಚಿಯಾದ ಊಟ ನೀಡುವ ಮೂಲಕ ವಿದ್ಯಾರ್ಥಿಗಳ ಆರೋಗ್ಯದ ಕಾಳಜಿಯನ್ನು ಅಡುಗೆ ಸಿಬ್ಬಂದಿ ನಿರ್ವಹಿಸುತ್ತಿದ್ದಾರೆ. ಶಿಕ್ಷಣ ಕ್ಷೇತ್ರಕ್ಕೆ ಇವರ ಕೊಡುಗೆಯೂ ಮಹತ್ವದ್ದಾಗಿದೆ ಎಂದು ಅಭಿಪ್ರಾಯ ಹಂಚಿಕೊಂಡರು.
ಏಳನೇ ತರಗತಿ ವಿದ್ಯಾರ್ಥಿಗಳಿಗೆ ನಿಘಂಟು ಮತ್ತು ಪೆನ್ ಕೊಡುಗೆಯಾಗಿ ನೀಡಿ ಬೀಳ್ಕೊಡುಗೆ ನೀಡಲಾಯಿತು. ವಿದ್ಯಾರ್ಥಿಗಳು ಶಾಲೆಗೆ ಗ್ಲೋಬ್ ಹಾಗೂ ಕುರ್ಚಿಗಳನ್ನು ಕೊಡುಗೆಯಾಗಿ ನೀಡಿದರು. ಇತರ ತರಗತಿಗಳ ಸಹಪಾಠಿಗಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸಿದರು.

ಗ್ರಾಪಂ ಸದಸ್ಯ ಸಂತೋಷ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶಿವಕುಮಾರ್, ಮುಖ್ಯ ಶಿಕ್ಷಕಿ ಯಾಸ್ಮಿನ್ ತಾಜ್, ಸಹಶಿಕ್ಷರಾದ ರೋಷನ್ ಅರಾ, ಮೋಹನ್, ಜಗದೀಶ್, ಪರಮೇಶ್ ಹಾಗೂ ಪಾಲಕರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net