

ಮಂಗಳೂರು : ತಲಪಾಡಿಯ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್‌ನಲ್ಲಿ ಕಾರ್ಗಿಲ್ ವಿಜಯ ದಿನ ಆಚರಿಸಲಾಯಿತು.
ಮುಖ್ಯ ಅತಿಥಿಯಾಗಿದ್ದ ಭಾರತೀಯ ಸೇನೆಯ ನಿವೃತ್ತ ಯೋಧ ಮೋಹನ್.ಕೆ. ಮಾತನಾಡಿ ‘ ವಿದ್ಯಾರ್ಥಿಗಳು ಉತ್ತಮ ಚಾರಿತ್ರೃ ರೂಪಿಸಿಕೊಂಡು ಹೆತ್ತವರಿಗೆ ಹೆಮ್ಮೆಯ ಮಕ್ಕಳಾಗಬೇಕು. ಸಮಾಜಕ್ಕೆ ಸ್ಪೂರ್ತಿಯಾಗಿ ಭಾರತದ ಆಸ್ತಿಯಾಗಿ ಬಾಳಬೇಕು ಎಂದರು.
ದೇಶಾಭಿಮಾನ ಸಾರುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು. ಶಾರದ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ನ ಪ್ರಾಂಶುಪಾಲೆ ಸುಷ್ಮಾ ದಿನಕರ್, ಶಾಲೆಯ ಪ್ರಾಂಶುಪಾಲ ಮೋಹನ್‌ದಾಸ್, ಉಪ ಪ್ರಾಂಶುಪಾಲೆ ಜಯಶ್ರೀ ಎಲ್ ಮತ್ತು ರಜನಿ. ಕೆ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ನಿಪುಣ್ ಸ್ವಾಗತಿಸಿ, ಅದ್ವಿಕ ವಂದಿಸಿದರು. ಸಮನ್ಯು ಮತ್ತು ಅದಿತಿ ಕಾರ್ಯಕ್ರಮ ನಿರೂಪಿಸಿದರು