

ಗಂಗೊಳ್ಳಿ: ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಗಂಗೊಳ್ಳಿ ಸುವರ್ಣ ಮಹೋತ್ಸವ-2024 ಆಮಂತ್ರಣ ಪತ್ರಿಕೆ ಬಿಡುಗಡೆ ಶೃಂಗೇರಿ ಶ್ರೀ ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಂ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದಲ್ಲಿ ಭಾನುವಾರ ನಡೆಯಿತು.
ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರ ಜಗದ್ಗುರು ಶ್ರೀ ವಿಧುಶೇಖರ ಭಾರತಿ ಮಹಾಸ್ವಾಮೀಜಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಆಶೀರ್ವಚನ ನೀಡಿದರು.
ಪುರೋಹಿತರಾದ ಜಿ.ರಾಘವೇಂದ್ರ ಆಚಾರ್ಯ, ಸಮಿತಿ ಅಧ್ಯಕ್ಷ ಸತೀಶ ಜಿ., ಪ್ರಧಾನ ಕಾರ್ಯದರ್ಶಿ ನಿತಿನ್ ಖಾರ್ವಿ, ಕಾರ್ಯದರ್ಶಿ ಶ್ರೀಧರ ಸಕ್ಲಾತಿ, ಗೋಪಾಲ ಖಾರ್ವಿ ದಾವನಮನೆ, ಸುರೇಂದ್ರ ಖಾರ್ವಿ, ರಘುವೀರ ಕೆ., ಮಹಿಳಾ ಸಮಿತಿ ಕಾರ್ಯದರ್ಶಿ ಸುಜಾತಾ ಬಾಬು ಖಾರ್ವಿ, ಉಷಾ ದಿನಕರ, ಸ್ವಾತಿ ಮಡಿವಾಳ, ನಾಗಪ್ಪಯ್ಯ ಪಟೇಲ್, ಪುರುಷೋತ್ತಮ ಆರ್ಕಾಟಿ, ಸುವರ್ಣ ಮಹೋತ್ಸವ ಸಮಿತಿ ಸದಸ್ಯರು, ಮಹಿಳಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠದ ಪ್ರಾಂತೀಯ ಧರ್ಮಾಧಿಕಾರಿ ಲೋಕೇಶ ಅಡಿಗ ಪ್ರಾಸ್ತಾವಿಕವಾಗಿ ಮಾತನಾಡಿದರು.