ಚಿತ್ರದುರ್ಗಕ್ಕೆ ಹೊರಟಿದ್ದ ಶರಣ್‌ ಪಂಪ್‌ವೆಲ್ ಗೆ ತಡೆ

sharan pumpwel
ವಿಶ್ವ ಹಿಂದು ಪರಿಷತ್ ದಕ್ಷಿಣ ಕರ್ನಾಟಕ ಪ್ರಾಂತ ಜಂಟಿ ಕಾರ್ಯದರ್ಶಿ ಶರಣ್ ಪಂಪ್‌ವೆಲ್.
Published on

ಶಿವಮೊಗ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಗಣೇಶ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಶಿವಮೊಗ್ಗ ಮಾರ್ಗವಾಗಿ ತೆರಳುತ್ತಿದ್ದ ವಿಶ್ವ ಹಿಂದು ಪರಿಷತ್ ದಕ್ಷಿಣ ಕರ್ನಾಟಕ ಪ್ರಾಂತ ಜಂಟಿ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಅವರನ್ನು ಶನಿವಾರ ಸಂಜೆ ನಗರದ ಹೊರವಲಯದಲ್ಲಿ ಪೊಲೀಸರು ತಡೆದು ವಾಪಸ್ ಕಳುಹಿಸಿದ್ದಾರೆ.

ಹಿರಿಯೂರಿನಲ್ಲಿ ವಿಎಚ್‌ಪಿ, ಬಜರಂಗದಳ ಭಾನುವಾರ ಆಯೋಜಿಸಿದ್ದ ಗಣೇಶ ಮೆರವಣಿಗೆಗೆ ಶನಿವಾರ ಸಂಜೆ ಶಿವಮೊಗ್ಗದಿಂದ ಕಾರಿನಲ್ಲಿ ಹೊರಟಿದ್ದರು. ಈ ಬಗ್ಗೆ ಮಾಹಿತಿ ಪಡೆದಿದ್ದ ಚಿತ್ರದುರ್ಗ ಜಿಲ್ಲಾಡಳಿತ ಶಿವಮೊಗ್ಗ ಹೊರವಲಯದ ಪುರಲೆ ಬಳಿ ಕಾರು ತಡೆದು ವಾಪಸ್ ಕಳುಹಿಸಿದ್ದು ಹಿಂದುಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.
ಹಿಂದು ಧರ್ಮದ ರಕ್ಷಣೆಗೆ ಕೆಲಸ ಮಾಡುತ್ತಿರುವ ಕಾರ್ಯಕರ್ತರನ್ನು ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯ ಮೂಲಕ ನಿಯಂತ್ರಿಸುತ್ತಿದೆ. ಇದು ಸರಿಯಾದ ಕ್ರಮವಲ್ಲ ಎಂದು ಬಜರಂಗದಳ ತೀವ್ರವಾಗಿ ಖಂಡಿಸಿದೆ. ಹಿಂದು ಕಾರ್ಯಕರ್ತರನ್ನು ತಡೆಯುವ ಬದಲು ದೇಶದ್ರೋಹಿ ಚಟುವಟಿಕೆ ಮಾಡುತ್ತಿರುವವರನ್ನು ತಡೆಯಬೇಕು ಎಂದು ಬಜರಂಗದಳದ ಶಿವಮೊಗ್ಗ ವಿಭಾಗದ ಸಂಯೋಜಕ ರಾಜೇಶ್ ಗೌಡ ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net