10 ರಂದು ಶರಣ ಸಾಹಿತ್ಯ ಪರಿಷತ್ ಬೆಳ್ಳಿಹಬ್ಬ

Sharan Sahitya Parishad, Belihabba, Indi, M.J. Patil, Veerashaiva Mahasabha, Amrithananda Sri,
ಶರಣ ಸಾಹಿತ್ಯ ಪರಿಷತ್ ಲೋಗೋ
Published on

ಇಂಡಿ: ತಾಲೂಕು ಶರಣ ಸಾಹಿತ್ಯ ಪರಿಷತ್ ವತಿಯಿಂದ ನ.10 ರಂದು ಪಟ್ಟಣದ ಬಸವರಾಜೇಂದ್ರ ಮಂಗಲ ಕಾರ್ಯಾಲಯದಲ್ಲಿ ಬೆಳಗ್ಗೆ 10 ಗಂಟೆಗೆ ಶರಣ ಸಾಹಿತ್ಯ ಪರಿಷತ್ ಬೆಳ್ಳಿಹಬ್ಬ ಕಾರ್ಯಕ್ರಮ ಜರುಗಲಿದೆ ಎಂದು ಇಂಡಿ ತಾಲೂಕು ಶಸಾಪ ಘಟಕದ ಅಧ್ಯಕ್ಷ ಬಿ.ಎಸ್.ಪಾಟೀಲ ತಿಳಿಸಿದ್ದಾರೆ.

ಈಗಾಗಲೇ ಸಮ್ಮೇಳನ ಸರ್ವಾಧ್ಯಕ್ಷರನ್ನಾಗಿ ನಿವೃತ್ತ ಉಪನ್ಯಾಸಕ ಎಂ.ಜೆ.ಪಾಟೀಲ ಅವರನ್ನು ಆಯ್ಕೆ ಮಾಡಲಾಗಿದೆ. ಸಮ್ಮೇಳನದ ಲಾಂಛನ ಬಿಡುಗಡೆಗೊಳಿಸಲಾಗಿದೆ.

ನ.10 ರಂದು ಬೆಳಗ್ಗೆ 7.30ಕ್ಕೆ ಧ್ವಜಾರೋಹಣವನ್ನು ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ, ಪರಿಷತ್ ಧ್ವಜಾರೋಹಣ ಅಧ್ಯಕ್ಷ ಬಿ.ಎಸ್.ಪಾಟೀಲ ನೆರವೇರಿಸುವರು. 8 ಗಂಟೆಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಪ್ರವಾಸಿ ಮಂದಿರದಿಂದ ಬಸವರಾಜೇಂದ್ರ ಮಂಗಲ ಕಾರ್ಯಾಲಯದ ವರೆಗೆ ನಡೆಯಲಿದೆ.

ಅಮೃತಾನಂದ ಶ್ರೀಗಳು, ವೀರಶೈವ ಮಹಾಸಭೆ ರಾಜ್ಯಾಧ್ಯಕ್ಷ ಶಂಕರ ಬಿದರಿ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಯಶವಂತರಾಯಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು ಎಂದು ಬಿ.ಎಸ್.ಪಾಟೀಲ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net