

ಕಲಬುರಗಿ: ಶರಣಬಸವೇಶ್ವರ ಮಹಾದಾಸೋಹ ಸಂಸ್ಥಾನದ ಎಂಟನೇ ಪೀಠಾಧಿಪತಿ ಶ್ರೀ ಶರಣಬಸವಪ್ಪ ಅಪ್ಪ ಅವರ ಆರೋಗ್ಯ ಸ್ಥಿರವಾಗಿದೆ, ಭಕ್ತರು ಗೊಂದಲಕ್ಕೆ ಒಳಗಾಗಬಾರದು ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಶುಕ್ರವಾರ ರಾತ್ರಿ ಸಣ್ಣ ಪ್ರಮಾಣದ ಉಸಿರಾಟದ ಸೋಂಕಿನ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಿಸಿದ್ದು, ಆರೋಗ್ಯ ಸ್ಥಿರವಾಗಿದ್ದು, ಸುಸ್ಥಿಯಲ್ಲಿದ್ದಾರೆ. ವೈದ್ಯರು ತಪಾಸಣೆ ನಡೆಸಿದ್ದು, ಚಿಕಿತ್ಸೆ ನೀಡುತ್ತಿದ್ದು, ಸಹಜ ಸ್ಥಿತಿಯಲ್ಲಿದ್ದಾರೆ ಎಂದು ತಿಳಿಸಿದ್ದಾರೆ.
ಪೂಜ್ಯ ಶ್ರೀ ಶರಣಬಸವಪ್ಪ ಅಪ್ಪ ಅವರು ಗುಣಮುಖರಾಗುತ್ತಿದ್ದು, ಶರಣಬಸವೇಶ್ವರ ಸಂಸ್ಥಾನದ ಭಕ್ತರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು. ಡಾ.ಅಪ್ಪಾಜಿ ಅವರ ಆರೋಗ್ಯ ಸ್ಥಿತಿ ಉತ್ತಮವಾಗಿದೆ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್ ಡಾ.ದಾಕ್ಷಾಯಿಣಿ ಅಪ್ಪ ತಿಳಿಸಿದ್ದಾರೆ.