

ಬೈಂದೂರು: ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಶನಿವಾರ ಶರನ್ನವರಾತ್ರಿ ಉತ್ಸವ ಸಂಪನ್ನಗೊಂಡಿತು. ವಿಜಯದಶಮಿಯಂದು ಅರ್ಚಕ ಬಿ.ಕೃಷ್ಣಮೂರ್ತಿ ನಾವಡ ನೇತೃತ್ವದಲ್ಲಿ ವಿಶೇಷ ಚಂಡಿಕಾಹವನ ಜರುಗಿತು. ಕಳೆದ ಒಂಬತ್ತು ದಿನಗಳಿಂದ ಪ್ರತಿದಿನ ದುರ್ಗಾಹೋಮ, ಚಂಡಿಕಾಹವನ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಸಂಜೆ ವಿವಿಧ ತಂಡಗಳಿಂದ ಭಜನೆ, ರಾತ್ರಿ ರಂಗಪೂಜೆ ಮತ್ತು ಮಹಾಪೂಜೆ ಜರುಗಿತು. ದೇವಸ್ಥಾನದ ಸೇವಾ ಸಮಿತಿ ಅಧ್ಯಕ್ಷ ನಾಕಟ್ಟೆ ನಾಗರಾಜ ಶೆಟ್ಟಿ ಹಾಗೂ ಸಮಿತಿಯ ಸರ್ವ ಸದಸ್ಯರು ಉತ್ಸವದ ಉಸ್ತುವಾರಿ ವಹಿಸಿದ್ದರು.