ಶರಣರ ವಚನಗಳು ಇಂದಿಗೂ ಪ್ರಸ್ತುತ

20 ygt 10
Published on

ಯಗಟಿಪುರ: 12ನೇ ಶತಮಾನದಲ್ಲಿ ಶ್ರೀ ಬಸವೇಶ್ವರರು ಎಲ್ಲ ಸಮಾಜವನ್ನು ಒಗ್ಗೂಡಿಸಿ ಶ್ರೇಷ್ಠ ಮಾನವತವಾದಿ ಎನಿಸಿಕೊಂಡಿದ್ದಾರೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಕಾರ್ಯದರ್ಶಿ ಎಚ್.ಎಂ ರೇಣುಕಾ ಪ್ರಸನ್ನ ಹೇಳಿದರು.
ಕಡೂರು ತಾಲೂಕು ಶರಣ ಸಾಹಿತ್ಯ ಪರಿಷತ್, ಕದಳಿ ಮಹಿಳಾ ವೇದಿಕೆ ಆಶ್ರಯದಲ್ಲಿ ಯಗಟಿಪುರದ ಶ್ರೀ ಮಲ್ಲಿಕಾರ್ಜುನ ಸ್ವಾಮಿ ಸಂಭಾಗಣದಲ್ಲಿ ಆಯೋಜಿಸಿದ್ದ ಶ್ರಾವಣ ಸಂಜೆ, ಶರಣರ ಸಂದೇಶ ಕಾರ್ಯಕ್ರಮದಲ್ಲಿ ಮಾತನಾಡಿ, ಬಸವೇಶ್ವರರು, ಚನ್ನಬಸವಣ್ಣ, ಅಲ್ಲಮಪ್ರಭು, ಅಕ್ಕಮಹಾದೇವಿ ಮುಂತಾದ ಶರಣರು ರಚಿಸಿದ ವಚನಗಳು ಇಂದಿಗೂ ಪ್ರಸ್ತುತ್ತವಾಗಿದೆ ಎಂದರು.
ತಾಲೂಕು ತಾಲೂಕು ಶರಣ ಸಾಹಿತ್ಯ ಪರಿಷತ್‌ನಿಂದ ಎಚ್.ಎಂ ರೇಣುಕಾ ಪ್ರಸನ್ನ ಅವರನ್ನು ಸನ್ಮಾನಿಸಲಾಯಿತು. ಪರಿಷತ್ ಅಧ್ಯಕ್ಷ ಜಿ.ಟಿ ರಾಜಶೇಖರ್, ಕಡೂರು ತಾಲೂಕು ವೀರಶೈವ ಮಹಾಸಭಾ ಅಧ್ಯಕ್ಷ ರೇಣುಕಾರಾಧ್ಯ, ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಾಲಯ ಟ್ರಸ್ಟ್ ಸದಸ್ಯ ಪಿ.ಎಂ ಶಿವಕುಮಾರ್, ವಿರೂಪಾಕ್ಷಪ, ಯಗಟ್ಟಿ ಪ್ರಸನ್ನ, ಮೋಹನ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net