ಶಾಲೆಗಳ ಸರ್ವತೋಮುಖ ಅಭಿವೃದ್ಧಿಗೆ ಪಠ್ಯೇತರ ಚಟುವಟಿಕೆ ಸಹಕಾರಿ: ಲಯನ್ ಗಂಗಾಧರಪ್ಪ

SAHUKARAHUNDI SCHOOL SHALEGALEDEGE VACHANAGALA NADIGE photo1
ಶರಣು ವಿಶ್ವವಚನ ಫೌಂಡೇಷನ್, ಲಯನ್ಸ್ ಕ್ಲಬ್ ಆಫ್ ಮೈಸೂರು ಮಿಲೇನಿಯಂ ಮತ್ತು ಸಂಜನಾ ಬಳಗ ಪ್ರತಿಷ್ಠಾನದ ವತಿತಯಿಂದ ತಾಲೂಕಿನ ಸಾಹುಕಾರಹುಂಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸಮವಸ್ತ್ರ, ವಚನದೀವಿಗೆ ಪ್ರಮಾಣಪತ್ರ ಮತ್ತು ವಚನ ಪುಸ್ತಕ ವಿತರಿಸಲಾಯಿತು. ಲಯನ್ ಗಂಗಾಧರಪ್ಪ, ರೂಪ ಕುಮಾರಸ್ವಾಮಿ,ಡಿ.ಎನ್ ಚಂದ್ರಶೇಖರ್ ಇತರರಿದ್ದರು.
Published on

ಮೈಸೂರು: ಶಾಲೆಗಳ ಸರ್ವತೋಮುಖ ಅಭಿವೃದ್ಧಿಯಲ್ಲಿ ಪಠ್ಯೇತರ ಚಟುವಟಿಕೆಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಲಯನ್ ಗಂಗಾಧರಪ್ಪ ಹೇಳಿದರು.

ಶರಣು ವಿಶ್ವವಚನ ಫೌಂಡೇಷನ್, ಲಯನ್ಸ್ ಕ್ಲಬ್ ಆಫ್ ಮೈಸೂರು ಮಿಲೇನಿಯಂ ಮತ್ತು ಸಂಜನಾ ಬಳಗ ಪ್ರತಿಷ್ಠಾನದ ವತಿಯಿಂದ ತಾಲೂಕಿನ ಸಾಹುಕಾರಹುಂಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಸಮವಸ್ತ್ರ ವಿತರಣೆ ಹಾಗೂ ಶಾಲೆಗಳೆಡೆಗೆ ವಚನಗಳ ನಡಿಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ದೈಹಿಕ ಬೆಳವಣಿಗೆ ಜತೆಗೆ ಮಾನಸಿಕ ಬೆಳವಣಿಗೆಗೂ ಆದ್ಯತೆ ನೀಡಬೇಕು. ಸಂಗೀತ, ನೃತ್ಯ, ಸಾಹಿತ್ಯ ಮತ್ತು ಕ್ರೀಡಾ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಬೇಕು. ವಚನ ಸಾಹಿತ್ಯ ಅಧ್ಯಯನ ಮಾಡುವುದರಿಂದ ಸುಸಂಸ್ಕೃತ ವ್ಯಕ್ತಿಗಳಾಗಿ ರೂಪುಗೊಳ್ಳಬಹುದು ಎಂದರು.

ಶರಣು ವಿಶ್ವವಚನ ಫೌಂಡೇಷನ್ ಸಂಸ್ಥಾಪಕಿ ರೂಪ ಕುಮಾರಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳು ಸಾಧನೆಯ ಮಾರ್ಗದಲ್ಲಿ ನಡೆಯಬೇಕಾದರೆ ಗಳಿಸಿದ ಜ್ಞಾನವನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಹನ್ನೆರಡನೆಯ ಶತಮಾನದ ಶರಣರು ವಚನಗಳ ಮೂಲಕ ಒಬ್ಬ ವ್ಯಕ್ತಿ ಹುಟ್ಟಿದಾಗಿನಿಂದ ಬದುಕಿನ ಕೊನೆಯವರೆಗೂ ಯಾವ ರೀತಿ ಬದುಕು ಕಟ್ಟಿಕೊಳ್ಳಬೇಕು ಎಂಬ ಕಾಯಕ ಮತ್ತು ದಾಸೋಹ ತತ್ವವನ್ನು ತಿಳಿಸಿದ್ದು ಅದರಂತೆ ನಾವು ನಡೆಯಬೇಕು ಎಂದು ತಿಳಿಸಿದರು.

ಲಯನ್ಸ್ ಕ್ಲಬ್ ಆಫ್ ಮೈಸೂರು ಮಿಲೇನಿಯಂ ಅಧ್ಯಕ್ಷ ಡಿ.ಎನ್ ಚಂದ್ರಶೇಖರ್ ಮಾತನಾಡಿ, ಬಸವಣ್ಣನವರ ಸಪ್ತಸೂತ್ರಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಸುಂದರವಾದ ಬದುಕನ್ನು ರೂಪಿಸಿಕೊಳ್ಳಬಹುದು ಎಂದರು. 25 ವಿದ್ಯಾರ್ಥಿಗಳಿಗೆ ಸಮವಸ್ತ್ರ, ವಚನದೀವಿಗೆ ಪ್ರಮಾಣಪತ್ರ ಮತ್ತು ವಚನ ಪುಸ್ತಕ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಆಫ್ ಮೈಸೂರು ಮಿಲೇನಿಯಂ ಕಾರ್ಯದರ್ಶಿ ಕೆ.ಪಿ.ಕಿರಣ್ ಕುಮಾರ್, ಮೈಸೂರು ಜಿಲ್ಲಾ ಶರಣು ವಿಶ್ವವಚನ ಫೌಂಡೇಷನ್ ಗೌರವಾಧ್ಯಕ್ಷ ಚನ್ನಬಸಪ್ಪ, ಮಂಜುಳಾ, ತೋಂಟದಾರ್ಯ, ಮುಖ್ಯಶಿಕ್ಷಕ ಅಶೋಕ, ಶಿಕ್ಷಕಿ ಸಾವಿತ್ರಿ, ಶಿವಣ್ಣ, ನಾರಾಯಣ್, ರವಿ, ಸುನಿತ, ರೇವೇಶ್, ಶಿವಮ್ಮ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net