ಶರತ್​ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್​!

sharath bacchegowda
Published on

ಬೆಂಗಳೂರು: ಶಾಶ್ವತವಾಗಿ ಪಕ್ಷೇತರ ಅಭ್ಯರ್ಥಿಯಾಗಿ ಉಳಿಯುವುದು ಎಂದಿದ್ದ ಶಾಸಕ ಶರತ್ ಬಚ್ಚೇಗೌಡ ಕೊನೆಗೂ ಕಾಂಗ್ರೆಸ್​ ಸೇರುವ ಕಾಲ ಸನಿಹದಲ್ಲಿದೆ.

ಎಂಟಿಬಿ ನಾಗರಾಜ್​ ವಿರುದ್ಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಕ್ಷೇತ್ರದ ಬೈ ಎಲೆಕ್ಷನ್​ನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲವು ಸಾಧಿಸಿದ್ದ ಶರತ್ ಬಚ್ಚೇಗೌಡ, ಇದೀಗ ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್​ಗೆ ಸೇರಲು ಸಜ್ಜಾಗಿದ್ದಾರೆ. ಅದಕ್ಕಾಗಿ ಫೆ.25ರಂದು ಮುಹೂರ್ತ ಫಿಕ್ಸ್ ಮಾಡಲಾಗಿದ್ದು, ಅಂದು ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಸೇರಲಿದ್ದಾರೆ.

ಶರತ್​ ಬಚ್ಚೇಗೌಡರನ್ನು ಕಾಂಗ್ರೆಸ್​ಗೆ ಸೇರ್ಪಡೆಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾರನ್ನು ಒಪ್ಪಿಸುವಲ್ಲಿ ರಾಜ್ಯ ಕಾಂಗ್ರೆಸ್​ ಘಟಕ ಯಶಸ್ವಿಯಾಗಿದೆ. ದೆಹಲಿಯ ಹಿರಿಯ ವಕೀಲರ ಬಳಿ ಚರ್ಚೆ ಮಾಡಿದ ಡಿ.ಕೆ. ಶಿವಕುಮಾರ್, ವಕೀಲರ ಸಲಹೆ ಮೇರೆಗೆ ಕಾಂಗ್ರೆಸ್​ಗೆ ಸೇರಿಸಿಕೊಳ್ಳಲು ಫೈನಲಿ ಅಸ್ತು ಎಂದಿದ್ದಾರೆ. ಅದರಂತೆ ಫೆ.25ರಂದು ಸೇರ್ಪಡೆ ಕಾರ್ಯಕ್ರಮ ಆಗಲಿದ್ದು, ಕಾಂಗ್ರೆಸ್​ನ ನಾಯಕರಾದ ದಿನೇಶ್ ಗುಂಡೂರಾವ್ ಮತ್ತು ಕೃಷ್ಣ ಬೈರೇಗೌಡ ಕೂಡ ಉಪಸ್ಥಿತರಿರಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net