

ಶಿವಮೊಗ್ಗ: ಯಾರೇ ತಪ್ಪು ಮಾಡಿದ್ದರೂ ಕ್ರಮ ಕೈಗೊಳ್ಳಲಾಗುವುದು. ನಿರಂತರ ಜ್ಯೋತಿ ಯೋಜನೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು. ಶರಾವತಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಲೋಕಸಭೆ ಚುನಾವಾಣೆ ಬಳಿಕ ಗ್ಯಾರಂಟಿ ಯೋಜನೆಗಳನ್ನು ರದ್ದು ಮಾಡಲಾಗುತ್ತದೆ ಎಂಬ ಶಾಸಕ ಬಾಲಕೃಷ್ಣ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು ಸಿಎಂ ಹೇಳಿಕೆ ಮುಖ್ಯವೋ? ಶಾಸಕರ ಹೇಳಿಕೆ ಮುಖ್ಯವೋ? ಎಂದು ಸುದ್ದಿಗಾರರನ್ನೇ ಪ್ರಶ್ನಿಸಿದರು.
ಯಾವುದೇ ಗ್ಯಾರಂಟಿ ಯೋಜನೆ ರದ್ದು ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಂಗಾರಪ್ಪ ಸಿಎಂ ಆಗಿದ್ದಾಗ ನಾನು ಸಚಿವನಾಗಿದ್ದೆ. ಅಂದು ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡಿದ್ದನ್ನು ಇದುವರೆಗೂ ರದ್ದು ಮಾಡಿಲ್ಲ. ಜನಹಿತ ಕಾರ್ಯಗಳನ್ನು ಕಾಂಗ್ರೆಸ್ ಯಾವಾಗಲೂ ಮುಂದುವರಿಸುತ್ತದೆ ಎಂದು ಸುದ್ದಿಗಾರರಿಗೆ ತಿಳಿಸಿದರು