ಶರೀಫ, ಗೋವಿಂದಭಟ್ಟರ ರಥೋತ್ಸವ

5-hvr-12
Published on

ಶಿಗ್ಗಾಂವಿ: ಭಾವೈಕ್ಯತೆಯ ನಾಡು, ತಾಲೂಕಿನ ಶಿಶುವಿನಹಾಳ ಗ್ರಾಮದಲ್ಲಿ ತತ್ತ್ವಪದಕಾರ ಸಂತ ಶರೀಫಸಾಹೇಬರ ಮತ್ತು ಗುರುಗೋವಿಂದ ಭಟ್ಟರ ಮಹಾರಥೋತ್ಸವ ಸಹಸ್ರಾರು ಭಕ್ತರ ಜಯಘೊಷಗಳ ಮಧ್ಯದಲ್ಲಿ ಸಡಗರ ಸಂಭ್ರಮದಿಂದ ಗುರುವಾರ ನೆರವೇರಿತು.

ಸಂತ ಶರೀಫ-ಶಿವಯೋಗಿಗಳ ಜಾತ್ರಾ ಮಹೋತ್ಸವಕ್ಕೆ ದೂರದ ಊರುಗಳಿಂದ ತಂಡೋಪ ತಂಡವಾಗಿ ಆಗಮಿಸಿದ್ದ ಸಾವಿರಾರು ಭಕ್ತರು, ದಾರ್ಶನಿಕರು ಗದ್ದುಗೆಗೆ ಬೆಳಗ್ಗೆಯಿಂದಲೇ ಭಕ್ತಿ, ಭಾವದಿಂದ ವಿಶೇಷ ಪೂಜೆ ಸಲ್ಲಿಸಿದರು. ಜಾತ್ರೆಗೆ ವಿಶೇಷ ವಾಹನದ ವ್ಯವಸ್ಥೆ ಮಾಡಲಾಗಿತ್ತು.

ಸಂಜೆ ಆಯೋಜಿಸಿದ್ದ ಮಹಾರಥೋತ್ಸಕ್ಕೆ ಹುಲಗೂರಿನ ಮೌನೇಶ್ವರಮಠದ ಶ್ರೀಗಳು ವಿಶೇಷ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ನಾಡೋಜ ಡಾ. ಮಹೇಶ ಜೋಶಿ, ಗಂಗಾಧರ ಸಾತಣ್ಣವರ, ಶಿಶುವಿನಾಳ ಟ್ರಸ್ಟ್ ಸಮಿತಿ ಅಧ್ಯಕ್ಷ ವಿ.ಎಸ್. ದೇಶಪಾಂಡೆ, ಎಪಿಎಂಸಿ ಅಧ್ಯಕ್ಷೆ ಪ್ರೇಮಾ ಪಾಟೀಲ, ಸದಸ್ಯ ಬಸನಗೌಡ್ರ ಮರಿಗೌಡ್ರ, ದೇವಣ್ಣ ಚಾಕಲಬ್ಬಿ, ಶಿವಾನಂದ ಮ್ಯಾಗೇರಿ, ಟ್ರಸ್ಟ್ ಪದಾಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net