ಕೂಡಿಗೆಯಲ್ಲಿ ಕಿರು ಷಷ್ಠಿ

Shashti
Published on

ಕುಶಾಲನಗರ:

ಕಾವೇರಿ ಮತ್ತು ಹಾರಂಗಿ ನದಿಗಳ ಸಂಗಮ ಕ್ಷೇತ್ರ ಕೂಡಿಗೆಯ ಉದ್ಭವ ಸುಬ್ರಹ್ಮಣ್ಯ ದೇವಾಲಯದಲ್ಲಿ ಕಿರುಷಷ್ಠಿ ಹಾಗೂ ಸತ್ಯನಾರಾಯಣ ಪೂಜೋತ್ಸವಗಳು ಭಾನುವಾರ ಶ್ರದ್ಧಾಭಕ್ತಿಯಿಂದ ನೆರವೇರಿದವು.

ಸ್ಥಳೀಯ ಸತ್ಯನಾರಾಯಣ ವ್ರತಾಚರಣ ಸಮಿತಿ ಸಹಯೋಗದಲ್ಲಿ ನಡೆದ ಪೂಜೋತ್ಸವದಲ್ಲಿ ನೂರಾರು ಭಕ್ತರು ಸತ್ಯನಾರಾಯಣ ಪೂಜೆಯಲ್ಲಿ ಭಾಗಿಯಾದರು. ಇದೇ ವೇಳೆ ಕೂಡಿಗೆ ಸುತ್ತಮುತ್ತಲಿನ ಗ್ರಾಮಗಳ ಭಕ್ತಾಧಿಗಳು ದೊಡ್ಡ ಸಂಖ್ಯೆಯಲ್ಲಿ ದೇವಾಲಯಕ್ಕೆ ಆಗಮಿಸಿ ಅಲಂಕೃತ ಉದ್ಭವ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆದು ಪುನೀತರಾದರು.

ದೇಗುಲದ ಪ್ರಧಾನ ಅರ್ಚಕ ನವೀನ್ ಭಟ್ ನೇತೃತ್ವದಲ್ಲಿ ಪೂಜಾವಿಧಿಗಳು ನಡೆದವು.

ಇದೇ ಸಂದರ್ಭ ಭಕ್ತಾಧಿಗಳಿಗೆ ದೇವಾಲಯದ ಆವರಣದಲ್ಲಿ ಅನ್ನಸಂತರ್ಪಣೆ ಮತ್ತು ಸತ್ಯನಾರಾಯಣ ಪೂಜೆ ಪ್ರಸಾದ ವಿತರಿಸಲಾಯಿತು.

ದೇವಾಲಯ ಸಮಿತಿ ಅಧ್ಯಕ್ಷ ಸೋಮಯ್ಯ, ಕಾರ್ಯದರ್ಶಿ ಶಮಂತ ರೈ, ಉಪಕಾರ್ಯದರ್ಶಿ ಮಂದಣ್ಣ, ಶ್ರೀಸತ್ಯನಾರಾಯಣ ವ್ರತಾಚರಣ ಸಮಿತಿ ಅಧ್ಯಕ್ಷ ಡಿ.ಕೆ. ಪೊನ್ನಪ್ಪ, ಕಾರ್ಯದರ್ಶಿ ಶಿವಕುಮಾರ್ ಸೇರಿದಂತೆ ಪದಾಧಿಕಾರಿಗಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net