ನೂರು ಎಕರೆ ಜಾಗೆಯಲ್ಲಿ ಕುರಿ ಮಾರುಕಟ್ಟೆ

Sheep Market in Hundred Acres
ಬಸವನಬಾಗೇವಾಡಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿದ ಸಚಿವ ಶಿವಾನಂದ ಪಾಟೀಲ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದರು. ಕಾರ್ಯದರ್ಶಿ ಶೈಲಜಾ ಎಂ.ವಿ., ಶಿವಾನಂದ ಗೊಠೆ, ಎಸ್.ಐ. ಕದರಿ, ಐ.ಎಸ್. ಔರಂಗಬಾದ ಇತರರಿದ್ದರು.
Published on

ಬಸವನಬಾಗೇವಾಡಿ: ಪಟ್ಟಣದ ಹೊರವಲಯದಲ್ಲಿ ರೈತರ ಅನುಕೂಲಕ್ಕಾಗಿ ನೂರು ಎಕರೆ ಜಮೀನಿನಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.

ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶುಕ್ರವಾರ ವೀಕ್ಷಿಸಿ ಮಾತನಾಡಿದ ಅವರು, ವಿಜಯಪುರ ರಸ್ತೆಯಲ್ಲಿ ಈಗಿರುವ 13 ಎಕರೆ ವಿಸ್ತೀರ್ಣದ ಎಪಿಎಂಸಿಯಲ್ಲಿ ಕುರಿ, ಈರುಳ್ಳಿ ಇನ್ನಿತರ ವಹಿವಾಟು ನಡೆಯುತ್ತಿದೆ. ಇದರು ರಾಜ್ಯದಲ್ಲಿ ಅತಿಹೆಚ್ಚು ಕುರಿ ಮಾರಾಟದ ಮಾರುಕಟ್ಟೆಯಾಗಿದೆ. ಇಲ್ಲಿ ರೈತರಿಗೆ, ವ್ಯಾಪಾರಸ್ಥರಿಗೆ ವಹಿವಾಟಿಗೆ ತೊಂದರೆಯಾಗುತ್ತಿದೆ. ಪಟ್ಟಣದ ಹೊರವಲಯದಲ್ಲಿ ರೈತರ ಅನುಕೂಲಕ್ಕಾಗಿ ನೂರು ಎಕರೆ ಜಮೀನಿನಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದರು.

ಪಟ್ಟಣದ ಎಪಿಎಂಸಿಯಲ್ಲಿ ಈರುಳ್ಳಿ ವ್ಯಾಪಾರಸ್ಥರಿಗೆ ಮತ್ತು ರೈತರಿಗೆ ಅನುಕೂಲವಾಗುವ ಉದ್ದೇಶದಿಂದ ಇನ್ನಷ್ಟು ಅಭಿವೃದ್ಧಿಗೆ 1 ಕೋಟಿ ರೂ. ಅನುದಾನದಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲು ಕೃಷಿ ಮಾರುಕಟ್ಟೆ ಅಧಿಕಾರಿಗಳಿಗೆ ಸೂಚಿಸಿದರು.

ವಿಜಯಪುರ ನಗರದ ತೊರವಿ ರಸ್ತೆಯಲ್ಲಿರುವ ಎಪಿಎಂಸಿಯ 110 ಎಕರೆ ಜಮೀನು ಗುತ್ತಿಗೆ ಆಧಾರದ ಮೇಲಿದ್ದು. ಈಗ ಆ ಗುತ್ತಿಗೆ ಅವಧಿ ಮುಗಿಯಲು ಬಂದಿದೆ. ಅದನ್ನು ಮುಂದಿನ 100 ವರ್ಷದ ಅವಧಿಗೆ ಗುತ್ತಿಗೆ ಮುಂದುವರೆಸಲು ಕ್ರಮ ವಹಿಸಲಾಗುವುದು ಎಂದರು.

ವಿಜಯಪುರ ಎಪಿಎಂಸಿ ಕಾರ್ಯದರ್ಶಿ ಶೈಲಜಾ ಎಂ.ವಿ., ಸಹಾಯಕ ನಿರ್ದೇಶಕ ಶಿವಾನಂದ ಗೊಠೆ, ಸಹ ಕಾರ್ಯನಿರ್ವಾಹಕ ಅಭಿಯಂತರ ಎಸ್.ಐ. ಕದರಿ, ಸಹಕಾರ್ಯದರ್ಶಿ ಐ.ಎಸ್. ಔರಂಗಬಾದ, ಸಿಬ್ಬಂದಿ ಎಸ್.ಡಿ. ಮನಗೂಳಿ, ಆರ್.ಬಿ. ದುಲಾರಿ, ಜ್ಯೋತಿ ಬಿರಾದಾರ, ಎಪಿಎಂಸಿ ಮಾಜಿ ಅಧ್ಯಕ್ಷ ಶೇಖರ ಗೊಳಸಂಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ಜಿಪಂ ಮಾಜಿ ಅಧ್ಯಕ್ಷ ಚಂದ್ರಶೇಖರಗೌಡ ಪಾಟೀಲ, ಬಸವರಾಜ ಸೋಮಪುರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net