ಕುರಿಗಾಹಿ ಕೈಕಾಲು ಕಟ್ಟಿಹಾಕಿ ಕುರಿ ಕಳ್ಳತನ
ಕಳ್ಳನನ್ನು ಬಂಧಿಸಿದ ಪೊಲೀಸರು

IMG-20220926-WA0021.jpg
Published on

ಕೊಪ್ಪಳ: ಕುರಿಗಾಹಿಯನ್ನು ಥಳಿಸಿ 15ಕುರಿ ಕಳ್ಳತನ ಮಾಡಿದ್ದ ಕಳ್ಳನನ್ನು ಮುನಿರಾಬಾದ್ ಪೊಲೀಸರು ಬಂಧಿಸಿದ್ದಾರೆ.

ಕೊಪ್ಪಳ ತಾಲೂಕಿನ ಬೂದಗುಂಪಾ ಕ್ರಾಸ್ ಬಳಿ ಸೆ.18ರ ರಾತ್ರಿ ಎರ್ಟಿಗಾ ವಾಹನದಲ್ಲಿ ಬಂದ ಐವರು ಕಳ್ಳರು ಕುರಿಗಾಹಿ ದೊಡ್ಡ ನಾಗಪ್ಪ ಎಂಬಾತನನ್ನು ಥಳಿಸಿದ್ದಾರೆ. ಬಳಿಕ ಕೈ ಕಾಲು ಕಟ್ಟಿಹಾಕಿ 15 ಕುರಿಗಳನ್ನು ವಾಹನದಲ್ಲಿ ತುಂಬಿಕೊಂಡು ಪರಾರಿಯಾಗಿದ್ದರು. ಈ ಸಂಬಂಧ ಮುನಿರಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣ ಬೆನ್ನುಹತ್ತಿದ ಪೊಲೀಸರು ಯಾದಗಿರಿ ಜಿಲ್ಲೆಯ ಕುರುಕುಂಬಲತಾಂಡಾದಲ್ಲಿ ಕಳ್ಳರನ್ನು ಪತ್ತೆ ಹಚ್ಚಿದ್ದಾರೆ. ಕಳ್ಳತನಕ್ಕೆ ಬಳಸಿದ್ದ ಎರ್ಟಿಗಾ ವಾಹನ ಹಾಗೂ ಮೋತಿರಾಮ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಉಳಿದ ನಾಲ್ವರ ಪತ್ತೆಗೆ ಬಲೆ ಬೀಸಲಾಗಿದೆ. ಗ್ರಾಮೀಣಾ ಪೊಲೀಸ್ ಠಾಣೆ ಸಿಪಿಐ ವಿಶ್ವನಾಥ್ ಹಿರೇಗೌಡರ್ ಮಾರ್ಗದರ್ಶನದಲ್ಲಿ ಪೊಲೀಸರ ಕಾರ್ಯಾಚರಣೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net