ಲೋಡಿಂಗ್ ಲಾರಿಗಳಿಗೆ ಶೀಟ್ ಅಳವಡಿಕೆ

ಲೋಡಿಂಗ್ ಲಾರಿಗಳಿಗೆ ಶೀಟ್ ಅಳವಡಿಕೆ
Published on

ಹಾಸನ: ರೈಲ್ವೆ ಇಲಾಖೆಯಿಂದ ರಾಜಘಟ್ಟ ಬಳಿ ನಿರ್ಮಾಣ ಮಾಡುತ್ತಿರುವ ಲೋಡಿಂಗ್ ಲಾರಿಗಳಿಗೆ ಶೀಟ್ ಅಳವಡಿಕೆ ಕಾಮಗಾರಿಯಿಂದ ಸ್ಥಳೀಯರಿಗೆ ತೊಂದರೆ ಆಗುತ್ತಿದೆ ಎಂದು ಆರೋಪಿಸಿ ಸ್ಥಳೀಯರು ಮನವಿ ಮಾಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಶಾಸಕ ಸ್ವರೂಪ್ ಪ್ರಕಾಶ್ ಇತ್ತೀಚೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರೈಲ್ವೆ ಇಲಾಖೆಯ ರೈಲ್ವೆ ಕಾಮಗಾರಿಯಿಂದ ಸುತ್ತಮುತ್ತಲ 8 ಹಳ್ಳಿಗಳಿಗೆ ತೊಂದರೆ ಆಗುತ್ತಿದ್ದು ಕೈಗಾರಿಕಾ ಪ್ರದೇಶಕ್ಕೆ ತೆರಳುವ ಕಾರ್ಮಿಕರು ಹಾಗೂ ನಗರ ಪ್ರದೇಶ ಹಾಗೂ ಬೈಪಾಸ್ ರಸ್ತೆಗೆ ದಿನನಿತ್ಯ ಓಡಾಡುವ ವಾಹನಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ತೊಂದರೆ ಆಗುತ್ತದೆ ಎಂದು ಸ್ಥಳೀಯರು ದೂರಿದರು.

ಸ್ಥಳೀಯರು ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಶಾಸಕ ಸ್ವರೂಪ್ ತಕ್ಷಣ ಕಾಮಗಾರಿ ನಿಲ್ಲಿಸಿ ಸ್ಥಳೀಯರಿಗೆ ನೆರವಾಗಬೇಕು. ಈ ಬಗ್ಗೆ ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ಅವರ ಬಳಿ ನಿಯೋಗ ತೆರಳಿ ಮನವಿ ಸಲ್ಲಿಸಲಾಗುವುದು. ಅಲ್ಲಿಯ ವರೆಗೆ ಕಾಮಗಾರಿ ಸ್ಥಗಿತಗೊಳಿಸುವಂತೆ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net