ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಉನ್ನತ ತನಿಖೆ ನಡೆಸಿ

25 smg 8
Published on

ಶಿವಮೊಗ್ಗ: ಕೆಪಿಎಸ್​ಸಿ(ಕರ್ನಾಟಕ ಲೋಕಸೇವಾ ಆಯೋಗ)ಯ ಪ್ರಥಮ ದರ್ಜೆ ಸಹಾಯಕ ಹುದ್ದೆ ನೇಮಕಾತಿ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಹಾಗೂ ಉನ್ನತ ತನಿಖೆಗೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಸೋಮವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪ್ರಶ್ನೆಪತ್ರಿಕೆಗಳು ಸೋರಿಕೆಯಾಗುವುದು ಇದೇ ಮೊದಲಲ್ಲ. ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗುವುದು ಮತ್ತು ಭ್ರಷ್ಟಾಚಾರ ನಡೆಯುವುದು ಸಾಮಾನ್ಯ. ಇತ್ತೀಚೆಗೆ ಒಂದೇ ತಾಲೂಕಿನಿಂದ ಒಂದೇ ಪರೀಕ್ಷಾ ಕೇಂದ್ರದಿಂದ ಎಸ್​ಡಿಎ ಪರೀಕ್ಷೆಯಲ್ಲಿ ಅತಿಹೆಚ್ಚು ಅಭ್ಯರ್ಥಿಗಳು ಆಯ್ಕೆಯಾಗಿರುವುದು ವರದಿಯಾಗಿದೆ. ರಾಜ್ಯದಲ್ಲಿ ಇಂತಹ ಅಕ್ರಮಗಳು ಮತ್ತು ಭ್ರಷ್ಟಾಚಾರಗಳು ಮೇಲಿಂದ ಮೇಲೆ ನಡೆಯುತ್ತಿದ್ದರೂ ಕಡಿವಾಣ ಹಾಕುವಲ್ಲಿ ಕೆಪಿಎಸ್​ಸಿ ವಿಫಲವಾಗಿದೆ ಎಂದು ದೂರಿದರು.

ಅಕ್ರಮ ಮತ್ತು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಯಾವುದೇ ಕೆಲಸವನ್ನು ಕಂಡುಹಿಡಿಯದ ಕೆಪಿಎಸ್​ಸಿ ವಿರುದ್ಧ ರಾಜ್ಯ ಹೈಕೋರ್ಟ್ ಕೂಡ ಕೆಂಡಕಾರಿದೆ. ಪದೇಪದೆ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗುವುದರಿಂದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಮನೋಬಲ ಕುಗ್ಗಿ ಕೆಪಿಎಸ್​ಸಿ ಮೇಲಿರುವ ಭರವಸೆ ಕಳೆದುಕೊಳ್ಳುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರಶ್ನೆಪತ್ರಿಕೆ ಎಲ್ಲಿಂದ ಬಂತು? ಯಾರು ತಂದುಕೊಟ್ಟಿದ್ದಾರೆ ಮತ್ತು ಈ ಜಾಲದ ಹಿಂದೆ ಇನ್ನೂ ಎಷ್ಟೋ ಕಾಣದ ಕೈಗಳು ಅಡಗಿವೆ ಎಂಬುದನ್ನು ಉನ್ನತ ತನಿಖೆ ನಡೆಸಬೇಕೆಂದು ಮನವಿ ಮಾಡಿದರು.

ಮುಖಂಡರಾದ ಟಿ. ದರ್ಶನ್, ವಿಜಯ್, ಲಿಂಗರಾಜ್, ಸಂಜಯ್, ಸ್ವಾತಿ ಇತರರು ಪಾಲ್ಗೊಂಡಿದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net