ಬೆಳಗಾವಿ ಕರ್ಮಭೂಮಿ ಎಂದ ಶೆಟ್ಟರ್

shettar ne new
Published on

ಹುಬ್ಬಳ್ಳಿ : ಹುಬ್ಬಳ್ಳಿ ನನ್ನ ಜನ್ಮಭೂಮಿಯಾದರೆ, ಬೆಳಗಾವಿ ನನ್ನ ಕರ್ಮಭೂಮಿ. ಆ ಜಿಲ್ಲೆಯಲ್ಲಿ ಎರಡು ಬಾರಿ ಜಿಲ್ಲಾ ಉಸ್ತುವಾರಿಯಾಗಿ ಕೆಲಸ ಮಾಡಿದ್ದೇನೆ ಎಂದು ಮಾಜಿ ಸಿಎಂ ಹಾಗೂ ಬೆಳಗಾವಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಹೇಳಿದರು.

ನಗರದಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಮುಖಂಡರು ಹಾಗೂ ಕಾರ್ಯಕರ್ತರ ಸಂಪರ್ಕ ಮೊದಲಿನಿಂದಲೂ ಇದೆ ಎಂದು ತಿಳಿಸಿದರು.

ಅರಬಾವಿ, ಗೋಕಾಕ, ಸವದತ್ತಿ, ಬೆಳಗಾವಿ ನಗರ ಹಾಗೂ ಗ್ರಾಮೀಣ, ಬೈಲಹೊಂಗಲ ಸೇರಿದಂತೆ ಕ್ಷೇತ್ರದ ಎಲ್ಲ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಬುಧವಾರದಿಂದ ನಿರಂತರ ಚುನಾವಣೆ ಪ್ರಚಾರದಲ್ಲಿ ತೊಡಗಲಿದ್ದೇನೆ ಎಂದು ಹೇಳಿದರು.

ಈಗಾಗಲೇ ಬೆಳಗಾವಿ ಕ್ಷೇತ್ರದ ಎಲ್ಲ ಮುಖಂಡರೊಂದಿಗೆ ಮಾತನಾಡಿದ್ದೇನೆ. ಒಟ್ಟಾಗಿ ಚುನಾವಣೆ ಎದುರಿಸೋಣ, ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿ ಮಾಡೋಣ ಎಂಬ ಭರವಸೆ ನೀಡಿದ್ದಾರೆ. ಅಲ್ಲಿನ ಮುಖಂಡರು, ಕಾರ್ಯಕರ್ತರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದರು.

ಸಂಸದೆ ಮಂಗಳಾ ಅಂಗಡಿ ಕುಟುಂಬದವರು ನನಗೆ ಟಿಕೆಟ್ ಸಿಕ್ಕಿದ್ದಕ್ಕೆ ಸಂತೋಷ ವ್ಯಕ್ತಪಟ್ಟಿದ್ದು, ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ರಮೇಶ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಸಹೋದರರೂ ಬೆಂಬಲಿಸಿದ್ದಾರೆ ಎಂದು ತಿಳಿಸಿದರು.

ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದೇನೆ. ಎಲ್ಲ ಸಮಾಜದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಎದುರಿಸುತ್ತೇನೆ. ಜನಾರ್ಧನ ರೆಡ್ಡಿ ಅವರಂತೆ ಅನೇಕರು ಬಿಜೆಪಿಗೆ ವಾಪಸ್ಸಾಗಿದ್ದಾರೆ. ಬೇರೆ ಪಕ್ಷಗಳಿಂದಲೂ ಬಿಜೆಪಿಗೆ ಬರುತ್ತಿದ್ದಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net