ಬೆಳಗಾವಿ ಟಿಕೆಟ್ ಸಿಗುವ ವಿಶ್ವಾಸವಿದೆ

JS
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ದೆಹಲಿಯಲ್ಲಿ ಪಕ್ಷದ ವರಿಷ್ಠರನ್ನು ಭೇಟಿಯಾಗಿದ್ದೇನೆ. ಬೆಳಗಾವಿ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲು ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿದರು.

ಮಂಗಳವಾರ ಸಂಜೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬುಧವಾರ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಗುರುವಾರ ಅಥವಾ ಶುಕ್ರವಾರದಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಹೈಕಮಾಂಡ್ ನಾಯಕರೊಂದಿಗೆ ರ್ಚಚಿಸಿದಾಗ ಸಕಾರಾತ್ಮಕ ಸ್ಪಂದನೆ ವ್ಯಕ್ತವಾಗಿದೆ ಎಂದರು.

ಬೆಳಗಾವಿ ಲೋಕಶಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಜೊತೆಯೂ ರ್ಚಚಿಸಿದ್ದೇನೆ. ಬಿಜೆಪಿ ಸ್ಥಳೀಯ ನಾಯಕರ ಜತೆ ಸಮಾಲೋಚನೆ ಮಾಡಿದ್ದೇನೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡಿದ್ದೇನೆ. ಮಂಗಳವಾರ ಮಧ್ಯಾಹ್ನ ಪ್ರಭಾಕರ ಕೋರೆ, ಕವಟಗಿಮಠ ಮೊದಲಾದವರ ಜೊತೆ ರ್ಚಚಿಸಿದ್ದೇನೆ. ಯಾರಿಗೇ ಟಿಕೆಟ್ ಕೊಟ್ಟರೂ ಒಟ್ಟಾಗಿ ಕೆಲಸ ಮಾಡೋಣ ಅಂತ ತೀರ್ವನಿಸಿದ್ದೇವೆ ಎಂದು ಹೇಳಿದರು.

ನನಗೆ ಟಿಕೆಟ್ ತಪ್ಪಿಸಲು ಹುನ್ನಾರ ನಡೆಸಿದವರ ಬಗ್ಗೆ ಮಾತನಾಡುವುದಿಲ್ಲ. ಹಾವೇರಿ ಕ್ಷೇತ್ರದ ಅಭ್ಯರ್ಥಿ ಬದಲಾವಣೆ ಬಗ್ಗೆ ಗೊತ್ತಿಲ್ಲ. ನಾನು ಅಥವಾ ಈಶ್ವರಪ್ಪ ಪುತ್ರ ಅಭ್ಯರ್ಥಿಯಾಗುತ್ತೇವೆ ಅನ್ನೋ ಮಾಹಿತಿ ಇಲ್ಲ ಎಂದು ಸ್ಪಷ್ಟನೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net