ಶೆಟ್ಟರ್ ಮನೆಗೆ ಡಿಕೆಶಿ ಭೇಟಿ

DKC Sanmana
Published on

ಹುಬ್ಬಳ್ಳಿ : ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಬುಧವಾರ ಬೆಳಗ್ಗೆ ಇಲ್ಲಿನ ಕೇಶ್ವಾಪುರದ ಬಾದಾಮಿ ನಗರದಲ್ಲಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರ ಮನೆಗೆ ಭೇಟಿ ನೀಡಿ, ಶೆಟ್ಟರ್ ಅವರೊಂದಿಗೆ ಅಂದಾಜು ಒಂದು ತಾಸಿನವರೆಗೆ ಚರ್ಚೆ ನಡೆಸಿದರು.

ಮನೆಗೆ ಭೇಟಿ ನೀಡಿದ ಡಿ.ಕೆ. ಶಿವಕುಮಾರ, ಸಚಿವರಾದ ಸತೀಶ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳಕರ ಅವರನ್ನು ಜಗದೀಶ ಶೆಟ್ಟರ್ ಹಾಗೂ ಶಿಲ್ಪಾ ಜಗದೀಶ ಶೆಟ್ಟರ್ ಅವರು ಶಾಲು ಹೊದಿಸಿ, ಹೂವಿನ ಮಾಲೆ ಹಾಕಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಜಗದೀಶ ಶೆಟ್ಟರ್ ಅವರೊಂದಿಗೆ ಡಿ.ಕೆ. ಶಿವಕುಮಾರ, ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ, ನವಲಗುಂದ ಶಾಸಕ ಎನ್.ಎಚ್. ಕೋನರಡ್ಡಿ, ಕಾಂಗ್ರೆಸ್​ನ ಧಾರವಾಡ ಗ್ರಾಮೀಣ ಜಿಲ್ಲಾ ಅಧ್ಯಕ್ಷ ಅನಿಲಕುಮಾರ ಪಾಟೀಲ, ಮಹಾನಗರ ಜಿಲ್ಲಾ ಅಧ್ಯಕ್ಷ ಅಲ್ತಾಫ ಹಳ್ಳೂರ ಅವರು ಉಪಹಾರ ಸೇವಿಸಿದರು.

ಹುಡಾ ಮಾಜಿ ಅಧ್ಯಕ್ಷ ನಾಗೇಶ ಕಲಬುರ್ಗಿ, ಮಲ್ಲಿಕಾರ್ಜುನ ಸಾವಕಾರ, ಸದಾನಂದ ಡಂಗನವರ, ಬಂಗಾರೇಶ ಹಿರೇಮಠ ಹಾಗೂ ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net