ಬಿಜೆಪಿ ಬಲ ಹೆಚ್ಚಿಸಿದೆ ಶೆಟ್ಟರ್ ಆಗಮನ

Araga Jnanendra
Published on

ತೀರ್ಥಹಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಘರ್ ವಾಪಸಿಯಿಂದ ಪಕ್ಷಕ್ಕೆ ವಿಶೇಷ ಬಲ ಬಂದಿದ್ದು ಅವರನ್ನು ತುಂಬು ಹೃದಯದಿಂದ ಸ್ವಾಗತಿಸುವುದಾಗಿ ಶಾಸಕ ಆರಗ ಜ್ಞಾನೇಂದ್ರ ಹೇಳಿದ್ದಾರೆ. ರಾಷ್ಟಿçÃಯ ಸ್ವಯಂ ಸೇವಕ ಸಂಘದ ಕಟ್ಟಾಳುವಾಗಿದ್ದ ಜಗದೀಶ್ ಶೆಟ್ಟರ್ ಅವರಿಗೆ ಕಾಂಗ್ರೆಸ್ ಸಂಸ್ಕೃತಿಗೆ ಒಗ್ಗಿಕೊಳ್ಳಲು ಸಾಧ್ಯವೇ ಇಲ್ಲ ಎಂಬುದು ತಿಳಿದಿತ್ತು. ಆದರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅವರಿಗಾಗಿದ್ದ ಅಸಮಾಧಾನದಿಂದಾಗಿ ಪಕ್ಷವನ್ನು ತ್ಯಜಿಸಿದ್ದ ಅವರು ಪಕ್ಷಕ್ಕೆ ಹಿಂತಿರುಗಿರುವುದು ಕಾರ್ಯಕರ್ತರ ಉತ್ಸಾಹ ಇಮ್ಮಡಿಗೊಳಿಸಿದೆ. ಬಿಜೆಪಿಯಲ್ಲಿ ಎಲ್ಲ ರೀತಿಯ ಸ್ಥಾನಮಾನಗಳನ್ನೂ ಅನುಭವಿಸಿದ್ದ ಶೆಟ್ಟರ್ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಬಿಜೆಪಿಗೆ ಶಕ್ತಿ ತುಂಬುವುದರಲ್ಲಿ ಅವರ ನೆರವು ಸಹಕಾರಿಯಾಗಲಿದೆ ಎಂದು ಆರಗ ಜ್ಞಾನೇಂದ್ರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net