ಮಾಜಿ ಸಿಎಂ ಶೆಟ್ಟರ್ ಗೆ ಹೈಕಮಾಂಡ್ ಬುಲಾವ್

IMG-20230514-WA0030_1-1.jpg
Published on

ಹುಬ್ಬಳ್ಳಿ: ಕಾಂಗ್ರೆಸ್ ನಾಯಕ, ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರಿಗೆ ಹೈಕಮಾಂಡ್ ಬುಲಾವ್ ಬಂದಿದೆ.

ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಶೆಟ್ಟರ್ ಸೋಲಿನ ಬೆನ್ನಲ್ಲೇ ಬುಲಾವ್ ಬಂದಿರುವುದು ಕ್ಷೇತ್ರದಲ್ಲಿ ಕುತೂಹಲ ಕೆರಳಿಸಿದೆ.

ಬೆಂಗಳೂರಿಗೆ ಬರುವಂತೆ ಶೆಟ್ಟರ್ ಅವರಿಗೆ ಕರೆ ಮಾಡಿದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಹ್ವಾನ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಿಂದ ಬೆಂಗಳೂರಿನತ್ತ ಪ್ರಯಾಣ ಜಗದೀಶ ಶೆಟ್ಟರ್ ಅವರು ಭಾನುವಾರ ಸಂಜೆ ಪ್ರಯಾಣ ಬೆಳೆಸಿದರು.

ಶೆಟ್ಟರ್ ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಕಾಂಗ್ರೆಸ್ ಪಾಳಯದಲ್ಲಿ ಚರ್ಚೆ ನಡೆದಿದೆ ಎಂದು ಹೇಳಲಾಗುತ್ತಿದೆ.

ಒಟ್ಟಿನಲ್ಲಿ ಸೋತರೂ ಶೆಟ್ಟರ್ ಅವರನ್ನು ಲಿಂಗಾಯತ ಸಮಾಜದ ಮುಖಂಡ ಎಂದು ಪರಿಗಣಿಸಿ ಹೈಕಮಾಂಡ್ ಬುಲಾವ್ ನೀಡಿರುವುದು ಕುತೂಹಲ‌ ಮೂಡಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net