ಶಿಗ್ಗಾಂವಿ: ಕಸದ ರಾಶಿಯಲ್ಲಿ ನವಜಾತ ಶಿಶು ಪತ್ತೆ

New born baby
Published on

ಶಿಗ್ಗಾಂವಿ: ಆಗತಾನೆ ಹುಟ್ಟಿದ ಹೆಣ್ಣು ಮಗುವನ್ನು ರಸ್ತೆ ಬದಿಯ ಕಸದ ರಾಶಿಯಲ್ಲಿ ಬಿಸಾಕಿ ಹೋಗಿರುವ ಅಮಾನವೀಯ ಘಟನೆ ಮಂಗಳವಾರ ಬೆಳಗ್ಗೆ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಮಗುವಿನ ಪಾಲಕರನ್ನು ಪೊಲೀಸರು ಪತ್ತೆ ಹಚ್ಚಿದ್ದು, ಪ್ರಕರಣ ದಾಖಲಿಸಿದ್ದಾರೆ.

ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಜಯನಗರ ಚಾಳದ ಹಿಂದಿನ ರಸ್ತೆಯ ಬದಿಯಲ್ಲಿ ಹಾಕಿರುವ ಕಸದ ರಾಶಿಯಲ್ಲಿ ನವಜಾತ ಹೆಣ್ಣು ಶಿಶುವನ್ನು ಅಪಾಯಕಾರಿ ಸ್ಥಿತಿಯಲ್ಲಿ ಬಿಸಾಡಿದ್ದಾರೆ. ಸ್ಥಳೀಯರು ಬೆಳಗಿನ ಜಾವ ಕಸ ಹಾಕುವ ಸಂದರ್ಭದಲ್ಲಿ ಮಗು ಇರುವುದು ಪತ್ತೆಯಾಗಿದೆ. ಕೂಡಲೇ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮಗು ಸಾವನ್ನಪ್ಪಿದೆ.

ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಗುವಿನ ಪೋಷಕರನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಮಗುವಿನ ತಾಯಿ ತಬಸುಮ್ ಕವೇಲಿವಾಲಿ ಮತ್ತು ಮಗುವನ್ನು ಕಸದಲ್ಲಿ ಎಸೆದ ತಬಸುಮ್ ಕವೇಲಿವಾಲಿ ತಾಯಿ ಬೀಬಿಬತುಲ್ ಸವಣೂರ ಇವರನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net