ಶಿಗ್ಗಾಂವಿ ಟಿಕೆಟ್ ಮುಸ್ಲಿಮರಿಗೆ ಕೊಡಿ; ಅಂಜುಮನ್ ಇಸ್ಲಾಂ ಸಂಸ್ಥೆ ಮನವಿ

Published on

ಹಾವೇರಿ: ಶಿಗ್ಗಾಂವಿ- ಸವಣೂರ ವಿಧಾನಸಭಾ ಕ್ಷೇತ್ರದಲ್ಲಿ 70 ಸಾವಿರ ಮುಸ್ಲಿಂ ಮತದಾರರಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮಾಜಕ್ಕೆ ಏನೂ ಕೊಡುಗೆ ಕೊಟ್ಟಿಲ್ಲ. ಹಾಗಾಗಿ, ಕಾಂಗ್ರೆಸ್ ಪಕ್ಷ ಈ ಬಾರಿ ಮುಸ್ಲಿಂ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು ಎಂದು ಶಿಗ್ಗಾಂವಿ ಅಂಜುಮನ್ ಇಸ್ಲಾಂ ಸಂಸ್ಥೆ ಪರವಾಗಿ ಸಂಸ್ಥೆಯ ಸದಸ್ಯ ಅಬ್ದುಲ್ ಕರೀಂ ಮೊಗಲಲ್ಲಿ ಹಕ್ಕೊತ್ತಾಯ ಮಂಡಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮನಾತನಾಡಿದ ಅವರು, ಸಿಎಂ ಬೊಮ್ಮಾಯಿ ಅವರು ಚುನಾವಣೆಯಲ್ಲಿ ಜಾತಿ ಬಣ್ಣ ಹಚ್ಚಿ ಗೆಲ್ಲುತ್ತಾ ಬಂದಿದ್ದಾರೆ. ಮುಸ್ಲಿಂ ಸಮುದಾಯಕ್ಕೆ ಒಂದು ಪೈಸೆ ಸಹಾಯ ಮಾಡಿಲ್ಲ. ಬೊಮ್ಮಾಯಿ ಅವರ ಮೇಲಿದ್ದ ನಿರೀಕ್ಷೆ ಸುಳ್ಳಾಗಿದೆ. ಅವರು ಬಿಜೆಪಿ ಐಡಿಯಾಲಜಿ ಪ್ರಕಾರ ಕೆಲಸ ಮಾಡುತ್ತಿದ್ದಾರೆ. ಅವರ ಬಳಿ ಮನವಿ ಪತ್ರ ತೆಗೆದುಕೊಂಡು ಹೋದರೆ, ನೀವು ನನಗೆ ಓಟು ಹಾಕಲ್ಲ ಎಂಬ ರೀತಿ ಮಾತನಾಡುತ್ತಿದ್ದಾರೆ. ಹೀಗಾಗಿ, ಶಿಗ್ಗಾಂವಿ ಕ್ಷೇತ್ರದಲ್ಲಿ ಬೊಮ್ಮಾಯಿ ಎದುರು ಕಾಂಗ್ರೆಸ್‌ನಿಂದ ಯಾರೇ ಸ್ಪರ್ಧಿಸಿದರೂ ಗೆಲ್ಲುವುದು ನಿಶ್ಚಿತ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net