ಬರಗಾಲ ಘೋಷಿಸಿ, ರೈತರಿಗೆ ನೆರವಾಗಿ

13-SGN BJP
Published on

ಶಿಗ್ಗಾಂವಿ: ರೈತರು ಬರಗಾಲದ ಸಂಕಷ್ಟದಲ್ಲಿದ್ದು, ಸರ್ಕಾರ ಅವರ ನೆರವಿಗೆ ಬರಬೇಕು ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಶಿವಾನಂದ ಮೈಗೇರಿ ಹೇಳಿದರು. ಪಟ್ಟಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು ಸಾಲ ಮಾಡಿ ಬೀಜ, ಗೊಬ್ಬರ ಖರೀದಿಸಿ ಬಿತ್ತನೆ ಮಾಡಿದ ಬೆಳೆಗಳು ಮಳೆಯಿಲ್ಲದೆ ಒಣಗುತ್ತಿವೆ. ರೈತರು ಟ್ರಾೃಕ್ಟರ್‌ಗಳ ಮೂಲಕ ಬೆಳೆಗಳನ್ನು ನಾಶಪಡಿಸುತ್ತಿದ್ದಾರೆ. ಸಾಲ ತೀರಿಸಲಾಗದೆ ಆತ್ಮಹತ್ಯೆಗೆ ಮುಂದಾಗುತ್ತಿದ್ದಾರೆ. ಇದನ್ನು ತಡೆಗಟ್ಟಲು ರಾಜ್ಯ ಸರ್ಕಾರ ಬರಗಾಲ ತಾಲೂಕು ಎಂದು ಘೋಷಿಸಿ ನೆರವು ನೀಡಬೇಕು ಎಂದರು.
ರಾಜ್ಯ ಸರ್ಕಾರದ ವಿರುದ್ಧ ರೈತರು, ರೈತ ಪರ ಸಂಘಟನೆಗಳು, ವಿರೋಧ ಪಕ್ಷಗಳು ಹಲವು ರೀತಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದರೂ ಬರಗಾಲ ಘೋಷಣೆಗೆ ಸಿಎಂ ಸಿದ್ದರಾಮಯ್ಯ ಹಿಂದೇಟು ಹಾಕುತ್ತಿರುವುದನ್ನು ಗಮನಿಸಿದರೆ ಇದು ರೈತ ವಿರೋಧಿ ಸರ್ಕಾರ ಎಂಬುದು ಸ್ಪಷ್ಟವಾಗುತ್ತದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net