ಹಾವೇರಿ: ಶಿಗ್ಗಾಂವಿ ಉಪ ಚುನಾವಣೆಯ ಸಂಘಟನಾತ್ಮಕ ಸಭೆ ಸೆ.13ರಂದು ಬೆಳಗ್ಗೆ 11 ಗಂಟೆಗೆ ಆರಂಭವಾಗಲಿದ್ದು, ಸಭೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ಡಾ.ರಾಧಾಮೋಹನದಾಸ್ ಅಗರವಾಲ ಆಗಮಿಸಲಿದ್ದಾರೆ.
ವಿರೋಧ ಪಕ್ಷದ ನಾಯಕ ಆರ್.ಅಶೋಕ, ಉಪನಾಯಕ ಅರವಿಂದ ಬೆಲ್ಲದ, ಶಾಸಕ ಮಹೇಶ ಟೆಂಗಿನಕಾಯಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ, ಇತರರು ಭಾಗವಹಿಸಲಿದ್ದಾರೆ.
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಬೂತ್ ಅಧ್ಯಕ್ಷರು, ಶಕ್ತಿಕೇಂದ್ರ, ಮಹಾ ಶಕ್ತಿಕೇಂದ್ರ, ಮಂಡಲ ಪದಾಧಿಕಾರಿಗಳು, ಮಾಜಿ ಸಚಿವರು, ಮಾಜಿ ಶಾಸಕರು, ಸ್ಥಳೀಯ ಸಂಸ್ಥೆಯ ಚುನಾಯಿತ ಪ್ರತಿನಿಧಿಗಳು, ಕಾರ್ಯಕರ್ತರು ಸಭೆಗೆ ಆಗಮಿಸುವಂತೆ ಬಿಜೆಪಿ ಜಿಲ್ಲಾ ಘಟಕ ಪ್ರಕಟಣೆ ಮೂಲಕ ಕೋರಿದೆ.