ಪ್ರವಾಸೋದ್ಯಮ ಅಭಿವೃದ್ಧಿಗೆ ಯೋಜನೆ ರೂಪಿಸಿ

9-sgn- hk patil
Published on

ಶಿಗ್ಗಾಂವಿ: ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಗಾಗಿ ಪಾರಂಪರಿಕ ಹಿನ್ನೆಲೆಯಲ್ಲಿ ಏನು ಮಾಡಬೇಕು ಎಂಬುದನ್ನು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಿಂದ ಯೋಜನೆಯ ರೂಪುರೇಷೆ ನೀಡಬೇಕು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಸಮೀಪದ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಶನಿವಾರ ಏರ್ಪಡಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು. ಬೆಳಗಾವಿ, ಹಾವೇರಿ, ಗದಗ, ಉತ್ತರ ಕನ್ನಡ, ಧಾರವಾಡ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಏನು ಅವಕಾಶಗಳಿವೆ ಎಂಬುದರ ಕುರಿತು ಕ್ರಿಯಾಯೋಜನೆ ತಯಾರಿಸಿ ಇಲಾಖೆಗೆ ಸಲ್ಲಿಸಬೇಕು ಎಂದು ವಿವಿ ಅಧಿಕಾರಿಗಳಿಗೆ ಸೂಚಿಸಿದರು.
ವಿವಿ ಕುಲಪತಿ ಟಿ.ಎಂ. ಭಾಸ್ಕರ್, ಹಿರಿಯ ಸಂಶೋಧನಾಧಿಕಾರಿ ಡಾ. ಕೆ. ಪ್ರೇಮಕುಮಾರ, ಸಹಾಯಕ ಕುಲಸಚಿವ ಶಹಜಹಾನ್ ಮುದಕವಿ, ಸಹಾಯಕ ಪ್ರಾಧ್ಯಾಪಕ ಡಾ. ವೆಂಕನಗೌಡ ಪಾಟೀಲ, ವಿಶ್ವವಿದ್ಯಾಲಯದ ಅಭಿವೃದ್ಧಿಗಾಗಿ ವಿವಿಧ ಬೇಡಿಕೆಗಳ ಕುರಿತು ಸಚಿವರ ಗಮನ ಸೆಳೆದರು.
ಕುಲಸಚಿವ ಸಿ.ಟಿ. ಗುರುಪ್ರಸಾದ, ಮೌಲ್ಯಮಾಪನ ಕುಲಸಚಿವ ಎನ್.ಎಂ. ಸಾಲಿ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ. ಲತೀಫ್ ಕುನ್ನಿಭಾವಿ, ತಹಸೀಲ್ದಾರ್ ಸಂತೋಷ ಹಿರೇಮಠ, ಉಪ ವಿಭಾಗಾಧಿಕಾರಿ ಮಹ್ಮದ್ ಕೀಜರ್, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net