ಮೊಟೇಬೆನ್ನೂರ ಹೆದ್ದಾರಿಯಲ್ಲಿ ಪ್ರತಿಭಟನೆ ಜ. 12ರಂದು

10-SGN GR BANNE
Published on

ಶಿಗ್ಗಾಂವಿ (ಗ್ರಾ): ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಜ. 12ರಂದು ಹಮ್ಮಿಕೊಂಡಿರುವ ರಾಷ್ಟ್ರೀಯ ಹೆದ್ದಾರಿ ಪ್ರತಿಭಟನೆಗೆ ಶಿಗ್ಗಾಂವಿ ತಾಲೂಕಿನ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಕೂಡಲಸಂಗಮದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
ತಾಲೂಕಿನ ಬಸವನಾಳ ಗ್ರಾಮದಲ್ಲಿ ಮಂಗಳವಾರ ಆಯೋಜಿಸಿದ್ದ ಪಂಚಮಸಾಲಿ ಸಮಾಜದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಪಂಚಮಸಾಲಿ, ಗೌಡ, ಮಲೆಗೌಡ, ದೀಕ್ಷೆ ಲಿಂಗಾಯತರಿಗೆ 2-ಎ ಮೀಸಲಾತಿ ಅನುಷ್ಠಾನ ಹಾಗೂ ಲಿಂಗಾಯತ ಉಪ ಸಮಾಜಗಳಿಗೆ ಒಬಿಸಿ ಮೀಸಲಾತಿಗೆ ರಾಜ್ಯ ಸರ್ಕಾರ ಕೂಡಲೇ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು. ಈ ಕುರಿತು ಆರಂಭವಾಗಿರುವ 2ನೇ ಭಾಗದ 6 ನೇ ಹಂತದ ಚಳವಳಿ ಅಂಗವಾಗಿ ಮೊಟೇಬೆನ್ನೂರ ರಾಷ್ಟ್ರೀಯ ಹೆದ್ದಾರಿಯಲ್ಲಿ 12ರಂದು ಶುಕ್ರವಾರ ಬೆಳಗ್ಗೆ 10 ಗಂಟೆಗೆ ಹಾವೇರಿ ಜಿಲ್ಲಾ ಮಟ್ಟದ ಇಷ್ಟಲಿಂಗ ಪೂಜೆಯೊಂದಿಗೆ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದರು. ಶಿವಾನಂದ ಬಾಗೂರ, ಬಸಲಿಂಗಪ್ಪ ನರಗುಂದ, ದೇವಣ್ಣ ಚಾಕಲಬ್ಬಿ, ವೀರನಗೌಡ ಪಾಟೀಲ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net