ಗಾಯಾಳುಗಳ ಆರೋಗ್ಯ ವಿಚಾರಿಸಿದ ಬಿವೈಆರ್

16 smg 9
Published on

ಶಿವಮೊಗ್ಗ: ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಕಡೂರು ಕ್ರಾಸ್ ಬಳಿ ಸರಣಿ ಅಪಘಾತದಲ್ಲಿ ಗಾಯಗೊಂಡವರ ಆರೋಗ್ಯವನ್ನು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ವಿಚಾರಿಸಿದರು.

ಭಾನುವಾರ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ್ದ ಅವರು, ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಆರೋಗ್ಯ ಸ್ಥಿತಿ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದರು. ಜತೆಗೆ ಗಾಯಾಳುಗಳಿಗೆ ಧೈರ್ಯ ತುಂಬಿದರು.

ಉಕ್ಕಡಗಾತ್ರಿಯ ಕರಿಬಸವೇಸ್ವರ ಸ್ವಾಮಿಯ ದರ್ಶನ ಪಡೆದು ಶಿಕಾರಿಪುರ ತಾಲೂಕಿನ ಮತ್ತಿಕೋಟೆಗೆ ವಾಪಸ್ ಬರುವಾಗ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲಿ ಮೃತಪಟ್ಟು ಉಳಿದವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು ಗಾಯಾಳುಗಳು ಚೇತರಿಸಿಕೊಳ್ಳುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net