ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಸಾವು

shimogga centrol jail
ಶಿವಮೊಗ್ಗ ಕೇಂದ್ರ ಕಾರಾಗೃಹ
Published on

ಶಿವಮೊಗ್ಗ: ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿಯೊಬ್ಬ ಅನಾರೋಗ್ಯದಿಂದ ಗುರುವಾರ ಸಂಜೆ ಮೆಗ್ಗಾನ್ ಆಸ್ಪತೆಯಲ್ಲಿ ಮೃತಪಟ್ಟಿದ್ದಾರೆ.

ಉಡುಪಿಯ ರಾಜೇಂದ್ರ ನಾಯ್ಕ(52) ಮೃತ ಕೈದಿ. ಅನಾರೋಗ್ಯದ ಹಿನ್ನೆಲೆಯಲ್ಲಿ ಭಾನುವಾರ(ನ.12) ಮೆಗ್ಗಾನ್ ಆಸ್ಪತೆಗೆ ಕರೆತಂದಿದ್ದ ಪೊಲೀಸರು, ರಕ್ತ ಪರೀಕ್ಷೆ ಬಳಿಕ ವಾಪಸ್ ಕರೆದೊಯ್ದಿದ್ದರು. ಆದರೆ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಮತ್ತೆ ಬುಧವಾರ ಆಸ್ಪತ್ರೆಗೆ ಕರೆತಂದು ಒಳರೋಗಿಯಾಗಿ ದಾಖಲಿಸಿದ್ದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಉಡುಪಿ ಜಿಲ್ಲೆಯ ಅಂಗಾರಕಟ್ಟೆ ಗ್ರಾಮದಲ್ಲಿ ಮೂರು ವರ್ಷದ ಹಿಂದೆ ನಡೆದಿದ್ದ ಕೊಲೆ ಪ್ರಕರಣದಲ್ಲಿ ರಾಜೇಂದ್ರ ನಾಯ್ಕಗೆ ಶಿಕ್ಷೆಯಾಗಿತ್ತು. ಹಾಗಾಗಿ ಅವರನ್ನು ಶಿವಮೊಗ್ಗದ ಸೆಂಟ್ರಲ್ ಜೈಲ್‌ಗೆ ಸ್ಥಳಾಂತರಿಸಲಾಗಿತ್ತು. ಅಂದಿನಿಂದ ಸೆಂಟ್ರಲ್ ಜೈಲಿನಲ್ಲಿ ಸಜಾಬಂಧಿಯಾಗಿದ್ದ ರಾಜೇಂದ್ರ ನಾಯ್ಕ ಕಳೆದ ಕೆಲ ವರ್ಷದಿಂದ ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net