ಸಿಎಂ ರಾಜೀನಾಮೆಗೆ ಬಿಜೆಪಿಯವರೇ ಕಾರಣ: ಶಾಸಕ ಸಂಗಮೇಶ್ವರ್ ಆರೋಪ

sangamesh (1)
Published on

ಶಿವಮೊಗ್ಗ: ಬಿ.ಎಸ್.ಯಡಿಯೂರಪ್ಪ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಕ್ಕೆ ಅವರ ಪಕ್ಷದವರೇ ಕಾರಣ ಎಂದು ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ವರ್ ಆರೋಪಿಸಿದರು.

ಶಿವಮೊಗ್ಗದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್‌ನವರು ಯಾರು ಕೂಡ ಅವರಿಗೆ ರಾಜೀನಾಮೆ ನೀಡಿ ಎಂದು ಕೇಳಿಲ್ಲ. ಅಧಿಕಾರದಲ್ಲಿದ್ದಾಗ ಮಾಡಿರುವ ಭ್ರಷ್ಟಾಚಾರ, ಸ್ವಜನ ಪಕ್ಷಪಾತ ನೋಡಿ ಸಚಿವ ಸಿ.ಪಿ.ಯೋಗೇಶ್ವರ್, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತಿತರರು ಒಳತಂತ್ರ ಮಾಡಿ ಕುರ್ಚಿಯಿಂದ ಕೆಳಗಿಳಿಯುವಂತೆ ಮಾಡಿದ್ದಾರೆ ಎಂದು ದೂರಿದರು.

ಮಠಾಧೀಶರು ಯಡಿಯೂರಪ್ಪ ಅವರ ಪರವಾಗಿ ವಕಾಲತ್ತು ವಹಿಸುವ ಅಗತ್ಯವಿರಲಿಲ್ಲ. ಗುರುಗಳು ಸಮಾಜದ ಉದ್ಧಾರಕ್ಕೆ ಶ್ರಮಿಸಬೇಕೇ ವಿನಾ ರಾಜಕಾರಣಕ್ಕೆ ತಲೆಹಾಕಬಾರದೆಂದು ವಿನಂತಿಸಿಕೊಳ್ಳುತ್ತೇನೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net