ಕಾಂಗ್ರೆಸ್ ನಾಯಕರಿಗೆ ಬಾಯಿ ಚಪಲ: ವಿಜಯೇಂದ್ರ ಕಿಡಿ

Vijayendra (3)
Published on

ಶಿವಮೊಗ್ಗ: ಕಾಂಗ್ರೆಸ್ ನಾಯಕರು ಚುನಾವಣೆ ಸಮೀಪಿಸುತ್ತಿರುವಾಗ ಬಾಯಿ ಚಪಲ ತೀರಿಸಿಕೊಳ್ಳಲು ಅವಹೇಳನಕಾರಿ ಹೇಳಿಕೆ ನೀಡುವುದನ್ನು ರೂಢಿಸಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ಪದದ ಅರ್ಥದ ಕುರಿತು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿಕೆ ನಿಜಕ್ಕೂ ಖಂಡನೀಯ. ಎಲ್ಲರೂ ಬಲವಾಗಿ ಇದನ್ನು ಖಂಡಿಸಬೇಕಿದೆ. ಹಿಂದುತ್ವದ ಬಗ್ಗೆ ಲಘುವಾಗಿ ಮಾತನಾಡುವುದು ಸರಿಯಲ್ಲ ಎಂದರು.

ಅರ್ಥಹೀನವಾಗಿ ಮಾತನಾಡೋದು ಯಾರಿಗೂ ಶೋಭೆ ತರುವುದಿಲ್ಲ. ರಾಜಕಾರಣದಲ್ಲಿ ಇರುವವರು ಈ ರೀತಿ ಹೇಳಿಕೆ ಕೊಡುತಾ ಹೋದರೆ ಅವರನ್ನು ದೇವರೇ ಕಾಪಾಡಬೇಕು. ಬಿಜೆಪಿ ಈ ಹೇಳಿಕೆಯನ್ನು ಬಲವಾಗಿ ಖಂಡಿಸುತ್ತದೆ. ಈ ಹೇಳಿಕೆಗೆ ಕಾಂಗ್ರೆಸ್ ನಾಯಕರು ಕೂಡ ಹೊಣೆಗಾರರಾಗಿ ಉತ್ತರ ಕೊಡಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net