ಕೌಟುಂಬಿಕ ಕಲಹ, ಪತ್ನಿ ಕೊಂದ ವ್ಯಕ್ತಿಗೆ ಜೀವಾವಧಿ ಶಿಕ್ಷೆ

10 smg manjunath
Published on

ಶಿವಮೊಗ್ಗ: ಕೌಟುಂಬಿಕ ಕಲಹದಲ್ಲಿ ಪತ್ನಿಗೆ ಕಿರುಕುಳ ನೀಡಿ ಕೊಲೆ ಮಾಡಿದ್ದ ವ್ಯಕ್ತಿಗೆ ಶಿವಮೊಗ್ಗದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿದೆ.

ತಾಲೂಕಿನ ಹಾಲ್ ಲಕ್ಕವಳ್ಳಿ ಗ್ರಾಮದ ಮಂಜುನಾಥ ಅಲಿಯಾಸ್ ಮಂಜ (36) ಜೀವಾವಧಿ ಶಿಕ್ಷೆಗೆ ಒಳಗಾದವ. ಈತ 2018ರ ನ.16ರಂದು ಹಾಲ್ ಲಕ್ಕವಳ್ಳಿಯಲ್ಲಿ ತನ್ನ ಮನೆಯಲ್ಲಿ ಕಿರುಕುಳ ನೀಡಿದ್ದಲ್ಲದೆ, ಜಗಳ ತೆಗೆದು ಕೊಲೆ ಮಾಡಿದ್ದ. ಈ ಬಗ್ಗೆ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಅಂದಿನ ತನಿಖಾಧಿಕಾರಿಯಾಗಿದ್ದ ದೊಡ್ಡಪೇಟೆ ಸಿಪಿಐ ವಸಂತ್‌ಕುಮಾರ್ ಅವರು ನ್ಯಾಯಾಲಯಕ್ಕೆ ಮಂಜುನಾಥ ಮೇಲೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಗುರುವಾರ ವಿಚಾರಣೆ ನಡೆಸಿದ ನ್ಯಾಯಾಧೀಶ ಕೆ.ಎಸ್.ಮಾನು ಅವರು ಮಂಜುನಾಥ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನಲೆಯಲ್ಲಿ ಜೀವಾವಧಿ ಶಿಕ್ಷೆ ನೀಡಿದ್ದಾರೆ.

ಅಲ್ಲದೆ, 50 ಸಾವಿರ ರೂ. ದಂಡ ಪಾವತಿಸದಿದ್ದರೆ ಹೆಚ್ಚುವರಿಯಾಗಿ 6 ತಿಂಗಳು ಸಾದಾ ಕಾರಾಗೃಹ ಶಿಕ್ಷೆಗೆ ನೀಡಿ ಆದೇಶಿಸಿದ್ದಾರೆ. ಸರ್ಕಾರಿ ಅಭಿಯೋಜಕಿ ಮಮತಾ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net