ಅನುಮಾನಾಸ್ಪದ ವರ್ತನೆ, ಹಲವರ ಮೇಲೆ ಕೇಸ್

a01ac130-0852-4d11-b2a6-fa10ad08f983
Published on

ಶಿವಮೊಗ್ಗ: ನಗರದ ಹೊರವಲಯ ಮತ್ತು ಖಾಲಿ ಸ್ಥಳಗಳಲ್ಲಿ ಗಾಂಜಾ ಸೇವಿಸಿ ಅನುಮಾನಾಸ್ಪದವಾಗಿ ವರ್ತಿಸುತ್ತಾ ಸಾರ್ವಜನಿಕರಿಗೆ ತೊಂದರೆ ನೀಡುವ ಸಂಶಯದ ಮೇಲೆ ದೊಡ್ಡಪೇಟೆ ಮತ್ತು ಕೋಟೆ ಠಾಣೆ ಪೊಲೀಸರು ಹಲವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದರು.

ಭಾನುವಾರ ಸಂಜೆ ದೊಡ್ಡಪೇಟೆ ಠಾಣಾ ವ್ಯಾಪ್ತಿಯಲ್ಲಿ 10ಕ್ಕೂ ಅಧಿಕ ಮತ್ತು ಕೋಟೆ ಠಾಣೆ ವ್ಯಾಪ್ತಿಯಲ್ಲಿ 15ಕ್ಕೂ ಅಧಿಕ ಮಂದಿ ಗಾಂಜಾ ಸೇವಿಸಿದ್ದ ಅನುಮಾನದ ಮೇಲೆ ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಯಿತು. ಬಳಿಕ ಎಲ್ಲರನ್ನೂ ಠಾಣೆಗೆ ಕರೆತಂದು ಎನ್‌ಡಿಪಿಎಸ್‌ನಡಿ ಪ್ರಕರಣ ದಾಖಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net