ಶಿವಮೊಗ್ಗಕ್ಕೆ ಮೋದಿ ಆಗಮನ ನಿಶ್ಚಿತ: ಸಚಿವ ಈಶ್ವರಪ್ಪ

Eshwarappa K. S (1)
Published on

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗಕ್ಕೆ ಬರುವುದು ನಿಶ್ಚಿತವಾಗಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಪ್ರಿಲ್ ತಿಂಗಳಲ್ಲಿ ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಆದರೆ ಯಾವ ಗ್ರಾಮ ಪಂಚಾಯಿತಿಗೆ ಭೇಟಿ ನೀಡುತ್ತಾರೆ ಎಂಬುದು ಇನ್ನೂ ಅಂತಿಮವಾಗಿಲ್ಲ. ಈ ಬಗ್ಗೆ ಜಿಲ್ಲಾಡಳಿತದೊಂದಿಗೆ ಪ್ರಧಾನಿ ಕಚೇರಿ ಅಧಿಕಾರಿಗಳು ಸಂಪರ್ಕದಲ್ಲಿದ್ದಾರೆ ಎಂದರು.

ಮೋದಿ ಅವರು ಪ್ರಧಾನಿ ಆದ ಬಳಿಕ ಗ್ರಾಮ ಪಂಚಾಯಿತಿ ಸೇರಿದಂತೆ ಎಲ್ಲ ಕ್ಷೇತ್ರದಲ್ಲೂ ಅಭಿವೃದ್ಧಿ ಆಗುತ್ತಿದೆ. ಜಲಧಾರೆಯಲ್ಲಿ ಇಡೀ ದೇಶಕ್ಕೆ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ನರೇಗಾದಲ್ಲಿ 13 ಕೋಟಿ ಮಾನವ ದಿನಗಳನ್ನು ಮೀರಿ ಹೆಚ್ಚುವರಿಯಾಗಿ 1.40 ಕೋಟಿ ಮಾನವ ದಿನಗಳನ್ನು ರಾಜ್ಯಕ್ಕೆ ನೀಡಿದ್ದಾರೆ. ಇದೀಗ ಮನೆ ಮನೆಗೆ ಗಂಗೆ ಯೋಜನೆ ಜಾರಿಗೊಳಿಸಿದ್ದು ಗ್ರಾಮೀಣ ಪ್ರದೇಶದಲ್ಲಿ ಪ್ರತಿನಿತ್ಯ 10 ಸಾವಿರ ಮನೆಗಳಿಗೆ ನಲ್ಲಿ ನೀರು ಕೊಡಲಾಗುತ್ತಿದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net