ಉಗ್ರ ಸಂಘಟನೆ ಜತೆ ಸಂಪರ್ಕ; ದಿಗ್ಭ್ರಮೆ ವ್ಯಕ್ತಪಡಿಸಿದ ಬಿ.ವೈ.ರಾಘವೇಂದ್ರ

byr
Published on

ಶಿವಮೊಗ್ಗ: ಯುವಕರು ಉಗ್ರ ಸಂಘಟನೆ ಜತೆ ಸಂಪರ್ಕ ಹೊಂದಿರುವ ವಿಷಯ ತಿಳಿದು ದಿಗ್ಭ್ರಮೆಯಾಗಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಆತಂಕ ವ್ಯಕ್ತಪಡಿಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಧಿತರು ಅಲ್ ಖೈದಾ, ಐಸಿಸ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವುದು ಗಾಬರಿಗೊಳ್ಳುವ ವಿಷಯ ಎಂದಿದ್ದಾರೆ. ಈಗಾಗಲೇ ಮೂವರನ್ನು ಪೊಲೀಸರು ಬಂಧಿಸಿದ್ದು ಮಂಗಳೂರಿನ ಗೋಡೆ ಬರಹ ಪ್ರಕರಣದಲ್ಲೂ ಪ್ರಮುಖ ಆರೋಪಿಯಾಗಿದ್ದರು. ಇಂತಹ ದೇಶದ್ರೋಹಿ ಯುವ ಶಕ್ತಿಗಳ ವಿರುದ್ಧ ಎಚ್ಚರಿಕೆಯಿಂದ ಇರಬೇಕಾಗಿದೆ. ಗೋಡೆ ಬರಹ ಪ್ರಕರಣದಲ್ಲಿ ಇಬ್ಬರು ಆರೋಪಿಗಳು ಜಾಮೀನಿನ ಮೇಲೆ ಹೊರ ಬಂದಿದ್ದರು ಎಂದರು.

ಗೃಹ ಸಚಿವ ಆಗರ ಜ್ಞಾನೇಂದ್ರ ಅವರು ದಿಟ್ಟ ಕ್ರಮ ಕೈಗೊಂಡಿದ್ದಾರೆ. ಇಂತಹ ಸಮಾಜ ವಿದ್ರೋಹಿ ಶಕ್ತಿಗಳನ್ನು ಹುಡುಕಿ ತೆಗೆಯುವ ಕೆಲಸ ಶುರುವಾಗಿದೆ. ಇಂತಹ ಉಗ್ರರನ್ನು ಶಿಕ್ಷಿಸುವಂತಹ ಪ್ರಕ್ರಿಯೆ ತ್ವರಿತವಾಗಿ ನಡೆಯಬೇಕಿದೆ. ಆ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾನೂನಿನ ಅಡಿಯಲ್ಲಿ ಸಾಕಷ್ಟು ಬದಲಾವಣೆ ತಂದಿದ್ದಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net