

<ಶಿವಮೊಗ್ಗ:ವಿಧಾನ ಮಂಡಲದ ಅಧಿವೇಶನ ಆರಂಭವಾಗಿದೆ. ಕಾಂಗ್ರೆಸ್‌ನವರು ನಮ್ಮ ಮೇಲೆ ವೃಥಾ ಟೀಕೆ ಮಾಡುತ್ತಿದ್ದಾರೆ. ಆದರೆ ಈ ಅಧಿವೇಶನದಲ್ಲಿ ಕಾಂಗ್ರೆಸ್‌ನವರು ಬೆತ್ತಲಾಗಲಿದ್ದಾರೆ. ಅವರ ಟೀಕಾಸ್ತ್ರಗಳನ್ನು ಎದುರಿಸಲು ನಮ್ಮ ಸಚಿವರು, ಶಾಸಕರು ಸಿದ್ಧರಿದ್ದಾರೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿದರು.
ಕಾಂಗ್ರೆಸ್‌ನವರು ತಮ್ಮನ್ನು ಮಾತ್ರ ಸತ್ಯ ಹರಿಶ್ಚಂದ್ರರೆಂದುಕೊಂಡಿದ್ದಾರೆ. ಕರ್ನಾಟಕದಲ್ಲಿ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವಿನ ಗುಂಪುಗಾರಿಕೆ ಈಗಾಗಲೇ ಜಗಜ್ಜಾಹೀರಾಗಿದೆ. ದೇಶದೆಲ್ಲೆಡೆ ತಿರಸ್ಕರಿಸಲ್ಪಟ್ಟಿರುವ ಕಾಂಗ್ರೆಸ್ ಕರ್ನಾಟದಲ್ಲೂ ಇತಿಹಾಸದ ಪುಟ ಸೇರಲಿದೆ ಎಂದರು.
ಯಾತ್ರೆ ಮೊದಲ ಕ್ಷಮೆ ಕೇಳಲಿ
ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ಆರಂಭಿಸಲಾಗಿದೆ. ಅಧಿಕಾರದಾಹಕ್ಕಾಗಿ ದೇಶವನ್ನು ವಿಭಜನೆ ಮಾಡಿದ್ದು ಕಾಂಗ್ರೆಸ್. ಇದಕ್ಕಾಗಿ ಮೊದಲು ರಾಹುಲ್ ಗಾಂಧಿ ದೇಶದ ಕ್ಷಮೆ ಕೋರಬೇಕೆಂದು ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದರು.
ಹಿಂದೆ ಕಾಂಗ್ರೆಸ್ ನಾಯಕರು ದೇಶದ ಸ್ವಾತಂತ್ರೃಕ್ಕಾಗಿ ಯಾತ್ರೆ ಮಾಡುತ್ತಿದ್ದರು. ಈಗಿನ ಕಾಂಗ್ರೆಸ್ ನಾಯಕರು ಅಧಿಕಾರಕ್ಕಾಗಿ ಯಾತ್ರೆ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.