ಕಾಂಗ್ರೆಸ್‌ಗೆ ಅರ್ಜಿ ಹಾಕಿಲ್ಲ: ಸಚಿವ ಹೆಬ್ಬಾರ್ ತಿರುಗೇಟು

HEBBAR
Published on

ಶಿವಮೊಗ್ಗ: ಕಾಂಗ್ರೆಸ್ ಬಿಟ್ಟು ಹೋದವರನ್ನು ಮತ್ತೆ ಪಕ್ಷಕ್ಕೆ ಮರಳುವಂತೆ ಆಹ್ವಾನಿಸುವುದು ಆ ಪಕ್ಷದ ನಾಯಕರ ಹಕ್ಕು. ಆದರೆ ಹೋಗುವುದು, ಹೋಗದೇ ಇರುವುದು ನಮ್ಮ ಸ್ವಾತಂತ್ರೃ. ನಾವು ಕಾಂಗ್ರೆಸ್‌ಗೆ ಬರುತ್ತೇವೆ ಎಂದು ಅರ್ಜಿ ಹಾಕಿಲ್ಲ. ಅದರ ಅವಶ್ಯಕತೆಯೂ ನಮಗಿಲ್ಲ ಎಂದು ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಬಿಟ್ಟು ಹೋದವರನ್ನು ಸೂರ್ಯ, ಚಂದ್ರ ಇರುವವರೆಗೂ ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸದನದಲ್ಲೇ ಹೇಳಿದ್ದಾರೆ. ಈಗ ಕೆಪಿಸಿಸಿ ಅಧ್ಯಕ್ಷರು ಪಕ್ಷ ಬಿಟ್ಟು ಹೋದವರು ಮರಳುವಂತೆ ಹೇಳುತ್ತಿರುವುದು ಆಶ್ಚರ್ಯಕರ ಸಂಗತಿ ಎಂದರು.

ನಾವು ಅನೇಕರು ಕಾಂಗ್ರೆಸ್ ಬಿಟ್ಟು ಬಿಜೆಪಿ ಸರ್ಕಾರದ ಭಾಗವಾಗಿದ್ದೇವೆ. ಈಗ ಮತ್ತೆ ಕಾಂಗ್ರೆಸ್‌ಗೆ ಮರಳುವ ಪ್ರಮೇಯವೇ ಇಲ್ಲ. ಈ ಬಗ್ಗೆ ಕಾಂಗ್ರೆಸ್‌ನಲ್ಲಿ ಏನು ಬೇಕಾದರೂ ಚರ್ಚೆ ನಡೆಯಲಿ. ಅದಕ್ಕೂ ನಮಗೆ ಸಂಬಂಧವೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net