ಒಂದೂವರೆ ಅಡಿ ನೀರಲ್ಲಿ ಸಿದ್ದು ಬೋಟಿಂಗ್: ಕೆ.ಎಸ್.ಈಶ್ವರಪ್ಪ ವ್ಯಂಗ್ಯ

kse
Published on

ಶಿವಮೊಗ್ಗ: ಬೆಂಗಳೂರಿನ ನೆರೆ ವೀಕ್ಷಣೆಗೆ ಒಂದೂವರೆ ಅಡಿ ನೀರಿನಲ್ಲಿ ಸಿದ್ದರಾಮಯ್ಯ ಬೋಟ್‌ನಲ್ಲಿ ಹೋಗಿದ್ದನ್ನು ಇಡೀ ರಾಜ್ಯದ ಜನರು ಗಮನಿಸಿದ್ದಾರೆ. ಆ ನೀರಿನಲ್ಲಿ ನನ್ನ ಮೊಮ್ಮಗ ಸಲೀಸಾಗಿ ನಡೆದುಕೊಂಡು ಹೋಗುತ್ತಾನೆ. ಪ್ರಚಾರಕ್ಕಾಗಿ ಸಿದ್ದರಾಮಯ್ಯ ಬೋಟ್ ಬಳಸಿದ್ದಾರೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದರು.

ರಾಜಧಾನಿ ಬೆಂಗಳೂರಿನಲ್ಲಿ ಉಂಟಾಗಿದ್ದ ಪ್ರವಾಹದ ಬಳಿಕ ಅಕ್ರಮ ಕಟ್ಟಡಗಳ ತೆರವಿಗೆ ನಮ್ಮ ಸರ್ಕಾರ ಮುಂದಾಗಿದೆ. ಬಸವರಾಜ ಬೊಮ್ಮಾಯಿ ಸರ್ಕಾರದ ವಿರುದ್ಧ ಟೀಕೆ ಮಾಡುವ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಅಕ್ರಮ ಕಟ್ಟಡಗಳನ್ನು ಏಕೆ ತೆರವು ಮಾಡಲಿಲ್ಲ? ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಇಂದಿನ ಸ್ಥಿತಿಗೆ ಸಿದ್ದರಾಮ್ಯಯ ಸರ್ಕಾರವೇ ಕಾರಣ. ಆರಂಭದಲ್ಲೇ ಅಕ್ರಮ ಕಟ್ಟಡಗಳಿಗೆ ಅವಕಾಶ ನೀಡಿದ ಸಿದ್ದರಾಮಯ್ಯ ಈಗ ಸಮಸ್ಯೆಗೆ ಬಿಜೆಪಿಯತ್ತ ಬೊಟ್ಟು ಮಾಡುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದರು.

ಕಾಲು ನೋವು ಕಾರಣ

ನಾನು ಅಧಿವೇಶನದಲ್ಲಿ ಭಾಗವಹಿಸದೇ ಇರುವುದಕ್ಕೆ ಕಾಲು ನೋವು ಕಾರಣ. ಕಳೆದ ಕೆಲ ದಿನಗಳಿಂದ ವಿಪರೀತ ಕಾಲು ನೋವಿದೆ. ಚಿಕಿತ್ಸೆಯನ್ನೂ ಪಡೆಯುತ್ತಿದ್ದೇನೆ. ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದಾರೆ. ಹೀಗಾಗಿ ಅಧಿವೇಶನಕ್ಕೆ ಹೋಗಿಲ್ಲ. ನಾನು ಅಧಿವೇಶನದಲ್ಲಿ ಭಾಗವಹಿಸದೇ ಇರುವುದಕ್ಕೆ ಕೆಲವರು ಬೇರೆ ಅರ್ಥ ನೀಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net