ಶಿಂಗಟಾಲೂರ ವೀರಭದ್ರೇಶ್ವರ ಕಾರ್ತಿಕೋತ್ಸವ

27 MDG 4
Published on

ಮುಂಡರಗಿ: ತಾಲೂಕಿನ ಸುಕ್ಷೇತ್ರ ಶಿಂಗಟಾಲೂರ ಶ್ರೀ ವೀರಭದ್ರೇಶ್ವರ ಕಾರ್ತಿಕೋತ್ಸವ ಸೋಮವಾರ ಸಂಜೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಿಂದ ನೆರವೇರಿತು. ದೇವಸ್ಥಾನಕ್ಕೆ ಭಕ್ತರು ಆಗಮಿಸಿ ಸರದಿಯಲ್ಲಿ ನಿಂತು ಶ್ರೀ ವೀರಭದ್ರೇಶ್ವರ ದೇವರ ದರ್ಶನ ಪಡೆದು ದೀಪಗಳನ್ನು ಹಚ್ಚಿ ಭಕ್ತಿಯನ್ನು ಸಮರ್ಪಿಸಿದರು.

ದೇವಸ್ಥಾನ ಟ್ರಸ್ಟ್ ಕಮಿಟಿ ಅಧ್ಯಕ್ಷ ಕರಬಸಪ್ಪ ಹಂಚಿನಾಳ ಮಾತನಾಡಿ, ಕಾರ್ತಿಕೋತ್ಸವಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಭಕ್ತರು ಬರುತ್ತಿದ್ದು, ವರ್ಷದಿಂದ ವರ್ಷಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಬರುವ ಭಕ್ತರಿಗೆ ರಾತ್ರಿ ಪೂರ್ತಿ ಪ್ರಸಾದ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ತಿಳಿಸಿದರು. ಶೇಖಣ್ಣ ಬಾಲೇಹೊಸೂರು, ಕೊಟ್ರೇಶ ಬಳ್ಳೊಳ್ಳಿ, ಮಂಜುನಾಥ ಮುಂಡವಾಡ, ಸುಭಾಸಪ್ಪ ಬಾಗೇವಾಡಿ, ಕಾಸಯ್ಯ ಬೆಂತೂರುಮಠ, ಕುಮಾರ ಸದಾಶಿವಪ್ಪನವರ, ಮಹಾಂತೇಶ ಗುಗ್ಗರಿ, ವಿ.ಎನ್. ಶೆಟ್ಟರ, ರಜನಿಕಾಂತ ದೇಸಾಯಿ, ನಾಗೇಶ ಹುಬ್ಬಳ್ಳಿ, ಎಸ್.ಡಿ. ಚವಡಿ, ಸೋಮು ಹಕ್ಕಂಡಿ, ಮುತ್ತು ಅಳವಂಡಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net