

ತುಮಕೂರು: ಶಿರಾ ಉಪಸಮರ ಅಖಾಡಕ್ಕೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಬುಧವಾರ ಅಧಿಕೃತವಾಗಿ ಎಂಟ್ರಿ ಕೊಟ್ಟಿದ್ದಾರೆ.
2 ದಿನ ಶಿರಾ ಪ್ರವಾಸ ಕೈಗೊಳ್ಳುವ ದೊಡ್ಡಗೌಡರು ಕ್ಷೇತ್ರದಲ್ಲಿ ಸಂಚಲನ ಮೂಡಿಸಲಿದ್ದಾರೆ. ಸ್ವಲ್ಪಮಟ್ಟಿಗೆ ಅಧೀರರಾಗಿರುವ ಕಾರ್ಯಕರ್ತರಲ್ಲಿ ಹುರುಪು ತುಂಬಲಿದ್ದಾರೆ.
ಗೌಡಗೆರೆ ಹೋಬಳಿ ಚಂಗಾವರದಲ್ಲಿ ಬೆಳಗ್ಗೆ 11.30ಕ್ಕೆ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಸಂಜೆ 4ಕ್ಕೆ ನಗರದ ಪಕ್ಷದ ಕಚೇರಿಗೆ ಭೇಟಿ ರಾಜಕೀಯ ಬೆಳವಣಿಗೆಗಳ ಕುರಿತು, ಚುನಾವಣಾ ತಂತ್ರಗಾರಿಕೆಗಳ ಬಗ್ಗೆ ಮುಖಂಡರ ಜತೆ ಚರ್ಚಿಸಲಿದ್ದಾರೆ. ಮಧುಗಿರಿ ಶಾಸಕ ಎಂ.ವಿ.ವೀರಭದ್ರಯ್ಯ ಮನೆಯಲ್ಲಿ ರಾತ್ರಿ ವಾಸ್ತವ್ಯ ಹೂಡುವ ದೇವೇಗೌಡರು ಗುರುವಾರ ಹುಲಿಕುಂಟೆ ಹೋಬಳಿ ಬರಗೂರಿನಲ್ಲಿ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗಿಯಾಗುವರು.