ಶಿರಂಗಾಲದಲ್ಲಿ ಮಹಿಳಾ ಗ್ರಾಮ ಸಭೆ

shirangala
Published on

ಮಡಿಕೇರಿ:

ಶಿರಂಗಾಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಹಿಳಾ ಗ್ರಾಮ ಸಭೆ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಅಧ್ಯಕ್ಷೆ ಲತಾಬಾಯಿ ಅಧ್ಯಕ್ಷತೆಯಲ್ಲಿ ಶನಿವಾರ ನಡೆಯಿತು. ಸಭೆಯಲ್ಲಿ ಹಾಜರಿದ್ದ ಮಹಿಳೆಯರು ಗ್ರಾಮ ಪಂಚಾಯತಿ ವ್ಯಾಪ್ತಿಯ ಉಪ ರಸ್ತೆಗಳ ದುರಸ್ತಿ ಪಡಿಸುವಿಕೆ ಸೇರಿದಂತೆ ಇನ್ನೂ ಹೆಚ್ಚಿನ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಚರ್ಚಿಸಿದರು. ಅಧ್ಯಕ್ಷೆ ಲತಾಬಾಯಿ ಮಾತನಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸ್ವಸಹಾಯ ಗುಂಪು ಮತ್ತು ಮಹಿಳೆಯರಿಗೆ ವಿವಿಧ ಯೋಜನೆಯ ಸವಲತ್ತುಗಳನ್ನು ಈಗಾಗಲೇ ಒದಗಿಸಲಾಗಿದೆ. ಅಲ್ಲದೆ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ನೀಡಲಾಗಿದೆ ಎಂದು ತಿಳಿಸಿದರು.

ಗ್ರಾಮ ಪಂಚಾಯತಿ ವ್ಯಾಪ್ತಿಯ ಸ್ವಸಹಾಯ ಗುಂಪು, ಮಹಿಳಾ ಸಂಘಟನೆ ಗುಂಪುಗಳಿAದ ಮಹಿಳಾ ಗ್ರಾಮ ಸಭೆಯ ಅಂಗವಾಗಿ ಮಹಿಳಾ ಸಂತೆ ನಡೆಯಿತು, ಸಂತೆಯಲ್ಲಿ ಮಹಿಳೆಯರು ಸಿದ್ಧ್ದಪಡಿಸಿದ ಗೃಹೋಪಯೋಗಿ ವಸ್ತುಗಳು, ತಿಂಡಿ-ತಿನಿಸುಗಳು ಹಾಗೂ ವಿವಿಧ ಬಗೆಯ ತರಕಾರಿಗಳ ಮಾರಾಟ ನಡೆಯಿತು.

ಈ ಸಂದರ್ಭದಲ್ಲಿ ಸದಸ್ಯರಾದ ಸವಿತಾ, ಭಾಗೀರತಿ, ಅಭಿವೃದ್ಧಿ ಅಧಿಕಾರಿ ಹೇಮಲತಾ, ಗ್ರಾಮ ಪಂಚಾಯತಿ ವ್ಯಾಪ್ತಿಯ ಸ್ವಸಹಾಯ ಗುಂಪುಗಳ ಸದಸ್ಯರು, ಮತ್ತು ವಿವಿಧ ಮಹಿಳಾ ಸಂಘಟನೆಯ ಸದಸ್ಯರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net