ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮ ಸಭೆ

shirangala
Published on

ಕುಶಾಲನಗರ:

ಕುಶಾಲನಗರ ತಾಲೂಕು ಶಿರಂಗಾಲ ಗ್ರಾಮ ಪಂಚಾಯಿತಿಯ 2024-25ನೇ ಸಾಲಿನ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮತ್ತು 15ನೇ ಹಣಕಾಸು ಯೋಜನೆಯ ಕಾಮಗಾರಿಗಳ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮ ಸಭೆ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಬುಧವಾರ ನಡೆಯಿತು. ನೋಡೆಲ್ ಅಧಿಕಾರಿಯಾಗಿ ತಾಲೂಕು ಸಮಾಜ ಕಲ್ಯಾಣಾಧಿಕಾರಿ ಸಿದ್ದೇಗೌಡ ಭಾಗವಹಿಸಿದ್ದರು.

ತಾಲೂಕು ಸಾಮಾಜಿಕ ಲೆಕ್ಕ ಪರಿಶೋಧನಾ ಸಂಯೋಜಕ ವಿ.ಡಿ. ದಿನೇಶ್ ಗ್ರಾಮ ಪಂಚಾಯಿತಿ ಮತ್ತು ಇತರೆ ಇಲಾಖೆಗಳು ನರೇಗಾ ಯೋಜನೆಯಡಿ ಕೈಗೊಂಡ ಕಾಮಗಾರಿಗಳು ಮತ್ತು 15ನೇ ಹಣಕಾಸು ಯೋಜನೆಯ ಕಾಮಗಾರಿಗಳ ಪಟ್ಟಿಯನ್ನು ಸಭೆಯ ಮುಂದೆ ಮಂಡಿಸಿದರು. ತಾಲೂಕು ಪಂಚಾಯಿತಿಯಿAದ ಕಳೆದ ವರ್ಷಗಳ ಅವಧಿಯಲ್ಲಿ ಕೈಗೊಂಡ ಕಾಮಗಾರಿಗಳ ಪಟ್ಟಿಯನ್ನು ಸಭೆಯ ಮುಂದೆ ಮಂಡಿಸಲಾಯಿತು. ತಾಲೂಕು ಪಂಚಾಯಿತಿಯಿAದ ಕೈಗೊಂಡ ಕಾಮಗಾರಿಗಳ ಬಗ್ಗೆ ವಿವರ ನೀಡಲು ಸಂಬAಧಪಟ್ಟ ಇಲಾಖಾಧಿಕಾರಿಗಳು ಉಪಸ್ಥಿತರಿಲ್ಲದಿರುವ ಬಗ್ಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಉದ್ಯೋಗ ಖಾತ್ರಿ ಯೋಜನೆಯಡಿ ವೈಯಕ್ತಿಕ ಸೌಲಭ್ಯಗಳನ್ನು ಪಡೆದುಕೊಳ್ಳುವವರು ಮುಂದಿನ 5 ವರ್ಷಗಳ ವರೆಗೆ ಈ ಕಾಮಗಾರಿಯನ್ನು ಅನ್ಯ ಉದ್ದೇಶಕ್ಕೆ ಬಳಸಿಕೊಳ್ಳುವುದಿಲ್ಲ ಎಂಬ ಮುಚ್ಚಳಿಕೆ ಪತ್ರವನ್ನು ಬರೆದುಕೊಡಬೇಕೆಂದು ಸಭೆಯಲ್ಲಿ ಸಾರ್ವಜನಿಕರ ಗಮನಕ್ಕೆ ತರಲಾಯಿತು. ಉದ್ಯೋಗ ಖಾತ್ರಿ ಯೋಜನೆಯಡಿ ತೆಗೆದುಕೊಳ್ಳಬಹುದಾದ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಲಾಯಿತು.

ಸಭೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎಂ. ಆರ್. ಲತಾಬಾಯಿ, ಉಪಾಧ್ಯಕ್ಷ ಹೆಚ್.ಎಸ್. ಬಸವರಾಜು, ಸದಸ್ಯರುಗಳಾದ ಎನ್.ಎನ್. ಧರ್ಮಪ್ಪ , ಎಸ್.ಎ. ಪ್ರದೀಪ್, ಡಿ.ಎಸ್. ಸರಿತಾ, ಬಿ.ಹೆಚ್. ಭಾಗೀರಥೀ, ಲಕ್ಷಿö್ಮÃ, ತಾಂತ್ರಿಕ ಸಹಾಯಕರಾದ ಕಾರ್ತಿಕ್, ಸಾಮಾಜಿಕ ಲೆಕ್ಕ ಪರಿಶೋಧನಾ ಸಂಪನೂಲ ವ್ಯಕ್ತಿ ವಿಕ್ರಮ್, ಪಿಡಿಒ ಹೇಮಲತಾ, ಕಾರ್ಯದರ್ಶಿ ಕೆ.ಸಿ. ರವಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net