

ಮುಂಡಗೋಡ: ಶಿರಸಿಯಿಂದ ಹುಬ್ಬಳ್ಳಿಯತ್ತ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ನ ಹಿಂಬದಿಯ ಎರಡು ಚಕ್ರಗಳಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ವಾತಾವರಣ ನಿರ್ವಣವಾದ ಘಟನೆ ಶನಿವಾರ ರಾತ್ರಿ ನಡೆದಿದೆ.
ಬಸ್ ಮುಂಡಗೋಡ ತಾಲೂಕಿನ ಕಾತೂರ ಗ್ರಾಮದ ಬಳಿ ಬರುತ್ತಿದ್ದಂತೆ ಹಿಂಬದಿ ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಚಾಲಕ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ.
ಕಾತೂರ ಗ್ರಾಮಸ್ಥರು ನೀರು ತಂದು ಬೆಂಕಿಯನ್ನು ನಂದಿಸಿದ್ದಾರೆ. ಬೆಂಕಿ ಕಾಣಿಸಿಕೊಂಡ ಬಗ್ಗೆ ಕಾರಣ ತಿಳಿದು ಬರಬೇಕಿದೆ.