ಶಿರಡಿ ಸಾಯಿಬಾಬಾ ಮಂಡಲ ಪೂಜೆ ನಾಳೆ

saibaba
Published on

ಹಾವೇರಿ: ಇಲ್ಲಿನ ಅಶ್ವಿನಿ ನಗರದ ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಗುರು ಸಾಯಿಬಾಬಾ ಅವರ ಮೂರ್ತಿ ಪ್ರತಿಷ್ಠಾಪನೆಯ ಮಂಡಲ ಪೂಜಾ ಕಾರ್ಯಕ್ರಮ ಅ. 14ರಂದು ಜರುಗಲಿದೆ.


ಕೂಡಲದ ಶ್ರೀ ಗುರುಮಹೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಬೆಳಗ್ಗೆ 6 ಗಂಟೆಗೆ ಸಾಯಿಬಾಬಾ ಮೂರ್ತಿಗೆ ವಿಶೇಷ ಅಭಿಷೇಕ. 8 ಗಂಟೆಗೆ ನವಗ್ರಹ ಪೂಜೆ, ಹೋಮ, ಹವನ, ಬೆಳಗ್ಗೆ 10 ಗಂಟೆಗೆ ಪೂರ್ಣಾಹುತಿ ಹಾಗೂ ಮಹಾ ಮಂಗಳಾರತಿ, 11 ಗಂಟೆಗೆ ವೇದಿಕೆ ಕಾರ್ಯಕ್ರಮ ಹಾಗೂ ಗಣ್ಯರಿಗೆ ಸನ್ಮಾನ ಸಮಾರಂಭ ಜರುಗಲಿದೆ. ಮಧ್ಯಾಹ್ನ 1 ಗಂಟೆಗೆ ಅನ್ನಪ್ರಸಾದ ಸೇವೆ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಶಿರಡಿ ಸಾಯಿಬಾಬಾ ಸೇವಾ ಸಮಿತಿ ಟ್ರಸ್ಟ್ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net